ಲಖನೌ: 2023ರ ಜನವರಿಯಲ್ಲಿ ಉತ್ತರ ಪ್ರದೇಶದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ಉದ್ಯಮ ಹೂಡಿಕೆಗೆ ಉತ್ತರ ಪ್ರದೇಶ ಅತ್ಯಂತ ಪ್ರಶಸ್ತ ತಾಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸೂಚನೆಯಂತೆ, ಉದ್ಯಮಗಳಿಗೆ ಅನುಕೂಲವಾಗುವಂತೆ ವಿವಿಧ ಅವಕಾಶ ಕಲ್ಪಿಸಲಾಗಿದೆ. ಜಾಗತಿಕ ಸಮಾವೇಶದಲ್ಲಿ ₹10 ಲಕ್ಷ ಕೋಟಿ ಹೂಡಿಕೆ ನಿರೀಕ್ಷಿಸಲಾಗಿದೆ ಎಂದು ಸಿಎಂ ಯೋಗಿ ತಿಳಿಸಿದ್ದಾರೆ.
ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶದ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಐದು ವರ್ಷದ ಹಿಂದೆ ನಮ್ಮ ರಾಜ್ಯದ ಆರ್ಥಿಕತೆ 5–6 ಸ್ಥಾನದಲ್ಲಿತ್ತು. ಈಗ ದೇಶದ ಎರಡನೇ ಅತಿದೊಡ್ಡ ಆರ್ಥಿಕತೆಯಾಗುವತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ.
ಜಾಗತಿಕ ಹೂಡಿಕೆದಾರರ ಸಮಾವೇಶದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದು ಸಿಎಂ ಯೋಗಿ ಹೇಳಿದ್ದಾರೆ.
ಮೂರು ದಿನ ನಡೆಯುವ ಸಮಾವೇಶದ ಕುರಿತು ಅಮೆರಿಕ, ಇಂಗ್ಲೆಂಡ್, ಕೆನಡಾ, ಯುಎಇ, ಸ್ವೀಡನ್, ಸಿಂಗಾಪುರ, ಫ್ರಾನ್ಸ್ ಮತ್ತು ಜರ್ಮನಿ ಸಹಿತ ವಿವಿಧ ರಾಷ್ಟ್ರಗಳಲ್ಲಿ ರೋಡ್‌ಶೋ ಮೂಲಕ ಪ್ರಚಾರ ನಡೆಸಿ ಉದ್ಯಮಿಗಳು, ಹೂಡಿಕೆದಾರರನ್ನು ಆಹ್ವಾನಿಸಲಾಗುತ್ತದೆ ಎಂದು ಯೋಗಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.