ಸೋಮವಾರ, ಸೆಪ್ಟೆಂಬರ್ 28, 2020
25 °C

ಉತ್ತರ ಪ್ರದೇಶ | ಯುವತಿ, ಪ್ರಿಯಕರನ ಸಜೀವ ದಹನ: ಮರ್ಯಾದೆಗೇಡು ಹತ್ಯೆಯ ಶಂಕೆ

ಪಿಟಿಐ Updated:

ಅಕ್ಷರ ಗಾತ್ರ : | |

honour killing

ಬಾಂದಾ (ಉತ್ತರ ಪ್ರದೇಶ): ಯುವತಿ ಮತ್ತು ಆಕೆಯ ಪ್ರಿಯಕರನನ್ನು ಸಜೀವ ದಹನ ಮಾಡಿರುವ ಘಟನೆ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯ ಕಾರ್ಚಾ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.

ಇದು ಮರ್ಯಾದೆಗೇಡು ಹತ್ಯೆ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

‘ಯುವತಿಯ ಕುಟುಂಬದವರೇ ಈ ಕೃತ್ಯವೆಸಗಿದ್ದಾರೆ. ಇಬ್ಬರನ್ನು ಗುಡಿಸಲಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. 23 ವರ್ಷದ ಭೋಲಾ, ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. 19 ವರ್ಷದ ಪ್ರಿಯಾಂಕ ಅವರ ದೇಹವು ಶೇಕಡ 80ರಷ್ಟು ಸುಟ್ಟು ಹೋಗಿತ್ತು. ವೈದ್ಯರ ಸಲಹೆ ಮೇರೆಗೆ ಅವರನ್ನು ಕಾನ್ಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ’ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಹೇಂದ್ರ ಪ್ರತಾಪ್‌ ಸಿಂಗ್‌ ಮಾಹಿತಿ ನೀಡಿದ್ದಾರೆ.

‘ಘಟನೆಗೆ ಸಂಬಂಧಿಸಿದಂತೆ ಯುವತಿಯ ಕುಟುಂಬದ ಒಂಬತ್ತು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಪೈಕಿ ಮೂವರನ್ನು ಬಂಧಿಸಲಾಗಿದೆ. ಉಳಿದವರನ್ನು ಶೀಘ್ರವೇ ಬಂಧಿಸುತ್ತೇವೆ’ ಎಂದು ಅವರು ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು