ಉತ್ತರ ಪ್ರದೇಶ ಚುನಾವಣೆ: ಗೆಲ್ಲಬಲ್ಲ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ ಹುಡುಕಾಟ

ಲಖನೌ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ ಆಡಳಿತದಲ್ಲಿರುವ ಬಿಜೆಪಿಯನ್ನು ಹಿಮ್ಮೆಟ್ಟಿಸಲು ಗೆಲ್ಲಬಲ್ಲ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ ಹುಡುಕಾಟ ನಡೆಸುತ್ತಿದೆ. ಕೆಲವು ಕ್ಷೇತ್ರಗಳಲ್ಲಾದರೂ ಎಸ್‌ಪಿ ಮತ್ತು ಬಿಎಸ್‌ಪಿ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ವಿಶ್ವಾಸವನ್ನು ಕಾಂಗ್ರೆಸ್ ಹೊಂದಿದೆ. ಆದರೆ ಈಗಾಗಲೇ ಎಸ್‌ಪಿ ಮತ್ತು ಬಿಎಸ್‌ಪಿ ಮುಂಬರುವ ಚುನಾವಣೆಯನ್ನು ಏಕಾಂಗಿಗಳಾಗಿ ಎದುರಿಸುವುದಾಗಿ ಘೋಷಿಸಿವೆ.
ಉತ್ತರ ಪ್ರದೇಶ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಘಟಕದ ಅಧ್ಯಕ್ಷೆ ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷದ ಹಿರಿಯ ಮುಖಂಡರಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಬೇಕು ಎಂದು ತಿಳಿಸಿರುವುದಾಗಿ 'ಡೆಕ್ಕನ್ ಹೆರಾಲ್ಡ್' ವರದಿ ಮಾಡಿದೆ.
ಒಂದು ವೇಳೆ ಏಕಾಂಗಿಯಾಗಿ ಸ್ಪರ್ಧಿಸುವಂತಾದರೆ 403 ಕ್ಷೇತ್ರಗಳಿಗೆ ಉತ್ತಮ ಅಭ್ಯರ್ಥಿಗಳನ್ನು ಹುಡುಕುವುದು ಕಾಂಗ್ರೆಸ್ ಪಾಲಿಗೆ ಸವಾಲಿನ ಕೆಲಸ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ಪ್ರಿಯಾಂಕಾಜೀ ಅವರು ಪಕ್ಷದ ಹಿರಿಯ ಮುಖಂಡರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಳಿದ್ದಾರೆ. ಅವರಿಗೆ ಸ್ಪರ್ಧೆಗೆ ಇಳಿಯುವ ನಿಟ್ಟಿನಲ್ಲಿ ಸ್ಥಳೀಯವಾಗಿ ಕೆಲಸ ಆರಂಭಿಸುವಂತೆ ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಡಿಎಚ್‌ಗೆ ಹೇಳಿದ್ದಾರೆ.
500 ವರ್ಷಗಳ ನಂತರ ಭೂಮಿ ಹೇಗಿರಲಿದೆ?
2017ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲ್ಲಲು ಸಾಧ್ಯವಾಗಿದ್ದು ಕೇವಲ 7 ಸ್ಥಾನಗಳು ಮಾತ್ರ. ಪಕ್ಷಾಂತರ, ಆಂತರಿಕ ಕಲಹ, ಬಂಡಾಯಗಳಿಂದಾಗಿ ಕಾಂಗ್ರೆಸ್ ನೆಲಕಚ್ಚಿತ್ತು. ಮಾಜಿ ಕೇಂದ್ರ ಸಚಿವ ಜಿತಿನ್ ಪ್ರಸಾದ್ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.