Uttar Pradesh Election: ಮುಲಾಯಂ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆ

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಬುಧವಾರ ಬಿಜೆಪಿ ಸೇರಿದ್ದಾರೆ. ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.
ಬಿಜೆಪಿಯ ಪ್ರಮುಖ ನಾಯಕರ ಸಮ್ಮುಖದಲ್ಲಿ ನವದೆಹಲಿಯಲ್ಲಿ ಅಪರ್ಣಾ ಯಾದವ್ ಪಕ್ಷಕ್ಕೆ ಸೇರಿದರು.
ಅಪರ್ಣಾ ಯಾದವ್ ಅವರು ಮುಲಾಯಂ ಸಿಂಗ್ ಯಾದವ್ ಅವರ ಮಗ ಪ್ರತೀಕ್ ಯಾದವ್ ಪತ್ನಿ. ಪ್ರತೀಕ್ 2017ರ ಚುನಾವಣೆಯಲ್ಲಿ ಲಖನೌ ಕಂಟೋನ್ಮೆಂಟ್ ಕ್ಷೇತ್ರದಿಂದ ಬಿಜೆಪಿಯ ರಿಟಾ ಬಹುಗುಣ ಜೋಶಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು.
Uttar Pradesh Election: ಉತ್ತರ ಪ್ರದೇಶದಲ್ಲಿ ಏಕಾಂಗಿ ಸ್ಪರ್ಧೆ; ಜೆಡಿಯು ಘೋಷಣೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.