ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಗೆಲ್ಲಬೇಕೆಂದು ನಾನು ಬಯಸುತ್ತೇನೆ: ಮಮತಾ

Last Updated 7 ಫೆಬ್ರುವರಿ 2022, 11:19 IST
ಅಕ್ಷರ ಗಾತ್ರ

ಕೋಲ್ಕತ್ತ: ಮುಂಬರುವ ಉತ್ತರ ಪ್ರದೇಶದ ಚುನಾವಣೆಯಲ್ಲಿ ಅಖಿಲೇಶ್‌ ಯಾದವ್‌ ಅವರು ಗೆಲ್ಲುವ ಅವಕಾಶವಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಈ ವಿಚಾರವಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಜತೆ ಮಾತನಾಡಿರುವ ಅವರು, ‘ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಗೆಲ್ಲಬೇಕೆಂದು ನಾನು ಬಯಸುತ್ತೇನೆ’ ಎಂದು ಹೇಳಿದ್ದಾರೆ.

‘ಜನರು ಬೆಂಬಲಿಸಿದರೆ, ಈ ಚುನಾವಣೆಯಲ್ಲಿ ಅಖಿಲೇಶ್‌ ಅವರು ಗೆಲ್ಲುವ ಅವಕಾಶವಿದೆ’ ಎಂದೂ ಮಮತಾ ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ಪರವಾಗಿ ಮಮತಾ ಅವರು ಯುಪಿಯಲ್ಲಿ ಪ್ರಚಾರ ಮಾಡಲಿದ್ದಾರೆ ಎಂಬ ಮಾತುಗಳೂ ಕೇಳಿಬಂದಿದೆ.

ಫೆ.10 ರಿಂದ ಆರಂಭವಾಗಲಿರುವ ಯುಪಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಕಳೆದ ವರ್ಷ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿಯು ಅಭೂತಪೂರ್ವ ಗೆಲವು ಸಾಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT