ನವದೆಹಲಿ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಗುರುವಾರ ಬಿಡುಗಡೆ ಮಾಡಿರುವ ವಿಡಿಯೊ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಆ ಹಿನ್ನೆಲೆಯಲ್ಲಿ ವಿಡಿಯೊವನ್ನು ಟ್ವೀಟ್ ಮಾಡಿದ್ದ ಯೋಗಿ, ‘ಮತದಾರರು ಎಚ್ಚರ ತಪ್ಪಿದರೆ, ಉತ್ತರ ಪ್ರದೇಶವು ಮತ್ತೊಂದು ಕಾಶ್ಮೀರ, ಕೇರಳ ಅಥವಾ ಪಶ್ಚಿಮ ಬಂಗಾಳವಾಗಿ ಬದಲಾಗುತ್ತದೆ’ ಎಂದು ಹೇಳಿದ್ದರು.

ಯೋಗಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ‘ಕಾಶ್ಮೀರದಿಂದ ಕೇರಳದವರೆಗೆ ಮತ್ತು ಗುಜರಾತ್‌ನಿಂದ ಪಶ್ಚಿಮ ಬಂಗಾಳದವರೆಗೆ ಭಾರತವು ತನ್ನ ಎಲ್ಲಾ ಬಣ್ಣಗಳಲ್ಲಿ ಸುಂದರವಾಗಿದೆ’ ಎಂದು ತಿಳಿಸಿದ್ದಾರೆ.

‘ನಮ್ಮ ಒಕ್ಕೂಟದಲ್ಲಿ ಶಕ್ತಿ ಇದೆ. ಇದು ನಮ್ಮ ಸಂಸ್ಕೃತಿ, ವೈವಿಧ್ಯತೆ, ಭಾಷೆ, ಜನ ಹಾಗೂ ರಾಜ್ಯಗಳ ಒಕ್ಕೂಟ. ಭಾರತದ ಈ ಚೈತನ್ಯವನ್ನು ಅವಮಾನಿಸಬೇಡಿ’ ಎಂದು ರಾಹುಲ್ ಟ್ವೀಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.