ಉತ್ತರ ಪ್ರದೇಶ | ಬೆಂಕಿ ಅನಾಹುತ: ಒಂದೇ ಕುಟುಂಬದ ಐವರು ಸಾವು

ಮವೂ: ಉತ್ತರ ಪ್ರದೇಶದ ಮವೂ ಜಿಲ್ಲೆಯ ಶಹಾಪುರ ಗ್ರಾಮದಲ್ಲಿ ಮನೆಯೊಂದರಲ್ಲಿ ಮಂಗಳವಾರ ಅಗ್ನಿ ಅನಾಹುತ ಸಂಭವಿಸಿದ್ದು, ಒಂದೇ ಕುಟುಂಬದ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.
ಮಾಹಿತಿ ಲಭಿಸಿದ ಕೂಡಲೇ ಪೊಲೀಸರು, ಅಗ್ನಿಶಾಮಕ ಮತ್ತು ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿದವು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಕೋಪಗಂಜ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತಪಟ್ಟವರಲ್ಲಿ ಮಹಿಳೆ ಹಾಗೂ ಮೂವರು ಅಪ್ರಾಪ್ತರು ಸೇರಿದ್ದಾರೆ ಎಂದು ಜಿಲ್ಲಾಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ.
ಪ್ರಾಥಮಿಕ ವರದಿ ಪ್ರಕಾರ ಸ್ಟೋವ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ತಿಳಿದು ಬಂದಿದೆ.
ತಲಾ ನಾಲ್ಕು ಲಕ್ಷ ರೂಪಾಯಿ ನೆರವು ನೀಡುವುದಾಗಿ ಜಿಲ್ಲಾಧಿಕಾರಿ ಘೋಷಿಸಿದರು.
UP | 5 members of a family including a woman, 1 adult & 3 minors died in a house fire that broke out at Shahpur village, Kopaganj PS in Mau district. Police along with the fire brigade, medical & relief teams reached the spot: DM Arun Kumar, Mau
(27.12) pic.twitter.com/0DsqW5HwDT— ANI UP/Uttarakhand (@ANINewsUP) December 27, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.