ಬುಲಂದ್‌ಶಹರ್(ಉತ್ತರ ಪ್ರದೇಶ): ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಮನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊತ್ವಾಲಿ ನಗರ ಪ್ರದೇಶದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿರುವ ಕುರಿತು ಮಧ್ಯಾಹ್ನ ಪೊಲೀಸರಿಗೆ ಕರೆ ಬಂದಿದೆ. ಸ್ಫೋಟ ಸಂಭವಿಸಿ, ಮನೆ ಧ್ವಂಸಗೊಂಡಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ಹೇಳಿದ್ದಾರೆ.
ಮೃತದೇಹಗಳನ್ನು ಹೊರತೆಗೆಯಲಾಗಿದೆ. ಪೊಲೀಸರು, ಜಿಲ್ಲಾಡಳಿತ ಸೇರಿದಂತೆ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಘಟನೆ ಕುರಿತು ಸಾಕ್ಷ್ಯ ಸಂಗ್ರಹಿಸಲು ವಿಧಿವಿಜ್ಞಾನ ತಂಡವನ್ನೂ ಕರೆಯಲಾಗಿದೆ. ನೆರೆಹೊರೆಯವರನ್ನು ವಿಚಾರಣೆಗೆ ಒಳಪಡಿಸಿ ಅಗತ್ಯ ಮಾಹಿತಿ ಪಡೆಯಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸ್ಥಳದಲ್ಲಿ ಕೆಲವು ಗ್ಯಾಸ್ ಸಿಲಿಂಡರ್‌ಗಳು ಮತ್ತು ಡ್ರಮ್‌ಗಳು ಪತ್ತೆಯಾಗಿವೆ. ಸ್ಫೋಟದ ಹಿಂದಿನ ಕಾರಣ ತಿಳಿಯಲು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಕುಮಾರ್ ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.