ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರು ಕೊಡಲು ಹೋದ ಬಾಲಕಿ ಮೇಲೆ ಪೊಲೀಸ್ ಅಧಿಕಾರಿ ಮತ್ತೆ ಅತ್ಯಾಚಾರ

ಅಕ್ಷರ ಗಾತ್ರ

ಲಖನೌ: ಅತ್ಯಾಚಾರ ಎಸಗಿರುವ ಕುರಿತು ದೂರು ದಾಖಲಿಸಲು ಹೋದಾಗ ಉತ್ತರ ಪ್ರದೇಶದ ಲಲಿತ್‌ಪುರದ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತೆ 13 ವರ್ಷದ ಅತ್ಯಾಚಾರ ಸಂತ್ರಸ್ತೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ನಾಲ್ವರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದು, ಬಳಿಕ ಸಂಬಂಧಿಯೊಂದಿಗೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಳು.

ಆರೋಪಿ ಅಧಿಕಾರಿ, ಠಾಣಾಧಿಕಾರಿ ತಿಲಕಧಾರಿ ಸರೋಜ್ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಆರೋಪಿ ಪರಾರಿಯಾಗಿದ್ದು, ಮೂರು ಪೊಲೀಸ್ ತಂಡಗಳು ಆತನನ್ನು ಹುಡುಕುತ್ತಿವೆ ಎಂದು ಲಲಿತ್‌ಪುರದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳವಾರ ಬಾಲಕಿ ತಂದೆ ದಾಖಲಿಸಿರುವ ಎಫ್‌ಐಆರ್‌ನಲ್ಲಿ, ನಾಲ್ವರು ವ್ಯಕ್ತಿಗಳು ಆಕೆಗೆ ಆಮಿಷ ಒಡ್ಡಿ ಏ. 22 ರಂದು ಭೋಪಾಲ್‌ಗೆ ಕರೆದೊಯ್ದು ನಾಲ್ಕು ದಿನಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ನಂತರ ಆರೋಪಿಯೇ ಆಕೆಯ ಗ್ರಾಮಕ್ಕೆ ಮರಳಿ ಕರೆತಂದು ಪರಾರಿಯಾಗುವ ಮೊದಲು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಕರೆತಂದಿದ್ದಾನೆ ಎಂದು ಹೇಳಲಾಗಿದೆ.

ಈ ವೇಳೆ ಠಾಣಾಧಿಕಾರಿ ಬಾಲಕಿಯನ್ನು ಆಕೆಯ ಚಿಕ್ಕಮ್ಮನ ಮನೆಗೆ ಕಳುಹಿಸಿದ್ದಾರೆ. ಆಕೆಯ ಹೇಳಿಕೆಯನ್ನು ದಾಖಲಿಸಲು ಮರುದಿನ ಪೊಲೀಸ್ ಠಾಣೆಗೆ ಕರೆಸಲಾಗಿದೆ. ಆದಾದ ಮರುದಿನ ಆರೋಪಿ ಅಧಿಕಾರಿಯು ಆಕೆಯ ಚಿಕ್ಕಮ್ಮನ ಸಮ್ಮುಖದಲ್ಲಿಯೇ ಪೊಲೀಸ್ ಠಾಣೆಯ ಕೊಠಡಿಯೊಳಗೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್‌ನಲ್ಲಿ ಬಾಲಕಿಯ ಚಿಕ್ಕಮ್ಮನ ಹೆಸರನ್ನು ಕೂಡ ಸೇರಿಸಲಾಗಿದೆ.

ಆರೋಪಿ ಠಾಣಾಧಿಕಾರಿ ವಿರುದ್ಧ ಅತ್ಯಾಚಾರ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಲಲಿತ್‌ಪುರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಎಸ್‌ಎಚ್‌ಒ ಅನ್ನು ಅಮಾನತು ಮಾಡಲಾಗಿದ್ದು, ಆತನನ್ನು ಕ್ರಿಮಿನಲ್ ಎಂದು ಗುರುತಿಸಲಾಗಿದೆ. ಸದ್ಯ ಆತನ ಬಂಧನಕ್ಕೆ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಎನ್‌ಜಿಒವೊಂದರ ಸಹಾಯದಿಂದ ನನ್ನ ಕಚೇರಿಗೆ ಬಂದ ಬಾಲಕಿಯು ಘಟನೆಯನ್ನು ವಿವರಿಸಿದ್ದಾಳೆ. ಅದಾದ ಬಳಿಕವೇ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಲಲಿತ್‌ಪುರದ ಪೊಲೀಸ್ ಮುಖ್ಯಸ್ಥ ನಿಥಿಲ್ ಪಥಾಕ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT