ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ ಚುನಾವಣೆ: 1 ಕೋಟಿ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್‌ಫೋನ್‌

Last Updated 21 ಡಿಸೆಂಬರ್ 2021, 4:20 IST
ಅಕ್ಷರ ಗಾತ್ರ

ಲಖನೌ: ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಉತ್ತರ ಪ್ರದೇಶದ ಸರ್ಕಾರವು ಒಂದು ಕೋಟಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಮತ್ತು ಸ್ಮಾರ್ಟ್‌ ಫೋನ್‌ಗಳನ್ನು ಉಚಿತವಾಗಿ ವಿತರಿಸಲು ನಿರ್ಧರಿಸಿದೆ.

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್‌ 25ರಂದು ಯೋಜನೆಯ ಮೊದಲ ಹಂತಕ್ಕೆ ಚಾಲನೆ ನೀಡಲಾಗುವುದು. ಅಂದು ಒಂದು ಲಕ್ಷ ಸ್ಮಾರ್ಟ್‌ ಫೋನ್‌ಗಳನ್ನು ವಿತರಿಸಲಾಗುವುದು. ಈ ಯೋಜನೆಯು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ. ಎಂ.ಎ., ಬಿ.ಎ., ಬಿಎಸ್‌ಸಿ, ಐಟಿಐ, ಎಂಬಿಬಿಎಸ್‌, ಎಂ.ಡಿ., ಬಿ.ಟೆಕ್‌, ಎಂ.ಟೆಕ್‌ ಮುಂತಾದ ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್ಲೆಟ್‌ ಪಡೆಯಲು ಅರ್ಹರು. ಈ ಸೌಲಭ್ಯ ಪಡೆಯುವುದಕ್ಕಾಗಿ ‘ಡಿಜಿ ಶಕ್ತಿ ಪೋರ್ಟಲ್‌’ನಲ್ಲಿ 38 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಲ್ಯಾಪ್‌ಟಾಪ್‌ ಬಳಸುವುದು ಹೇಗೆ ಎಂಬುದೇ ಗೊತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಅವರು ಕೆಳ ದಿನಗಳ ಹಿಂದಷ್ಟೇ ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT