ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ: ಉತ್ತರ ಪ್ರದೇಶ ಸರ್ಕಾರ

Last Updated 21 ಏಪ್ರಿಲ್ 2021, 2:16 IST
ಅಕ್ಷರ ಗಾತ್ರ

ಲಖನೌ: ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ಉಚಿತವಾಗಿ ನೀಡಲು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕ್ಯಾಬಿನೆಟ್ ಧನ್ಯವಾದ ಅರ್ಪಿಸಿದೆ.

‘ಪ್ರಧಾನಿ ಅವರ ನಿರ್ಧಾರವು ಕೋವಿಡ್‌ನ ಉತ್ತಮ ನಿರ್ವಹಣೆಗೆ ಸಹಾಯ ಮಾಡುತ್ತದೆ. ಬೃಹತ್ ಲಸಿಕಾ ಅಭಿಯಾನವು ಕರೋನ ವೈರಸ್ ಅನ್ನು ಸೋಲಿಸಲು ನೆರವಾಗುತ್ತದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ಹಾಕಲು ನಾವು ನಿರ್ಧರಿಸಿದ್ದೇವೆ. ರಾಜ್ಯ ಸರ್ಕಾರವು ತನ್ನದೇ ಆದ ಸಂಪನ್ಮೂಲಗಳೊಂದಿಗೆ ಲಸಿಕೆ ಕಾರ್ಯಕ್ರಮದಲ್ಲಿ ಮುಂದಡಿ ಇಡಲಿದೆ’ ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸೋಮವಾರ ನಡೆದ ತುರ್ತು ಸಭೆ ಬಳಿಕ18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮೇ 1 ರಿಂದ ಆರಂಭವಾಗಲಿರುವ ಮೂರನೇ ಹಂತದ ಲಸಿಕಾ ಅಭಿಯಾನದಲ್ಲಿ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿತ್ತು.

ಈ ಹಂತದಲ್ಲಿ ರಾಜ್ಯ ಸರ್ಕಾರಗಳು ತಮಗೆ ಅಗತ್ಯವಿರುವ ಲಸಿಕೆಯನ್ನು ತಯಾರಕರಿಂದ ನೇರವಾಗಿ ಮುಕ್ತ ಮಾರುಕಟ್ಟೆಯಲ್ಲಿ ಖರೀದಿಸಲು ಅವಕಾಶ ಮಾಡಿಕೊಟ್ಟಿತ್ತು.

ಈಗ ಜಾರಿಯಲ್ಲಿರುವ 1 ಮತ್ತು 2ನೇ ಹಂತದ ಲಸಿಕೆ ಕಾರ್ಯಕ್ರಮ ಮುಂದುವರಿಯಲಿದೆ. ಮುಂಚೂಣಿಯ ಕೋವಿಡ್‌ ಕಾರ್ಯಕರ್ತರಿಗೆ ಮತ್ತು 45 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ನೀಡಲಿದೆ. ಈ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT