ಸೀತಾಪುರ(ಉತ್ತರ ಪ್ರದೇಶ): ಇಲ್ಲಿನ ಸಂದಾನ ಹಳ್ಳಿಯಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಿಶುವೊಂದು ಸ್ಥಳದಲ್ಲಿಯೇ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ರಾತ್ರಿ ಭಗವತ್ ಕಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ನಿಂತಿದ್ದ ಕುಡಿದ ಆಮಲಿನಲ್ಲಿ ವ್ಯಕ್ತಿಯೊಬ್ಬ ಕಾರು ಚಲಾಯಿಸಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್.ಪಿ.ಸಿಂಗ್ ತಿಳಿಸಿದ್ದಾರೆ.
ಘಟನೆಯಲ್ಲಿ ಎಂಟು ತಿಂಗಳ ಮಗು ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಕಾರು ಅದೇ ಗ್ರಾಮದ ಅರವಿಂದ್ ಎಂಬುವವರಿಗೆ ಸೇರಿದ್ದಾಗಿದೆ. ಚಾಲಕ ರಜನೀಶ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.