ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಮಹಿಳಾ ಕೈದಿಗೆ ಗಲ್ಲು: ಮಥುರಾದಲ್ಲಿ ಸಿದ್ಧತೆ

Last Updated 17 ಫೆಬ್ರುವರಿ 2021, 14:15 IST
ಅಕ್ಷರ ಗಾತ್ರ

ಲಖನೌ: ಭಾರತಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ಇದೇ ಮೊದಲ ಬಾರಿಗೆ ಮಹಿಳಾ ಕೈದಿಯೊಬ್ಬರನ್ನು ಗಲ್ಲಿಗೇರಿಸಲು ಉತ್ತರ ಪ್ರದೇಶದ ಮಥುರಾ ಜಿಲ್ಲಾ ಜೈಲಿನಲ್ಲಿ ಸಿದ್ಧತೆ ನಡೆಸಲಾಗಿದೆ.

ಅಮೋಹ್ರಾ ನಿವಾಸಿಯಾಗಿರುವ ಶಬ್ನಂ, ಪ್ರಿಯಕರನ ಜೊತೆಗೂಡಿ ತನ್ನದೇ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಸಾಬೀತಾಗಿತ್ತು. ತಮ್ಮ ಸಂಬಂಧಕ್ಕೆ ಮನೆಯವರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ 2008 ರಲ್ಲಿ ಅಪರಾಧಿಗಳು ಈ ಕೃತ್ಯ ಎಸಗಿದ್ದರು.

ಶಿಕ್ಷೆಯ ವಾರಂಟ್‌ ಹೊರಡಿಸದ ಕಾರಣ, ಗಲ್ಲಿಗೇರಿಸುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿದ್ದ ಪವನ್‌ ಜಲ್ಲಾದ್‌ ಅವರು ಮಥುರಾ ಜೈಲಿಗೆ ಕಳೆದ ಎರಡು ತಿಂಗಳಿನಲ್ಲಿ ಎರಡು ಬಾರಿ ಭೇಟಿ ನೀಡಿದ್ದಾರೆ. ಗಲ್ಲಿಗೇರಿಸಲು ಹಗ್ಗವನ್ನು ಖರೀದಿಸಲು ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶಬ್ನಂ ಕ್ಷಮಾದಾನ ಅರ್ಜಿ ಅರ್ಜಿಯನ್ನು ಅಂದಿನ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ತಿರಸ್ಕರಿಸಿದ್ದರು. ಮರಣದಂಡನೆ ಆದೇಶವನ್ನು ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT