ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಡ್ಸೆಯ ಭಾರತದಲ್ಲಿ ಅಪರಾಧಿಗಳು ಮುಕ್ತವಾಗಿ ತಿರುಗುತ್ತಾರೆ: ಮೆಹಬೂಬಾ ಮುಫ್ತಿ

Last Updated 11 ಫೆಬ್ರುವರಿ 2022, 10:58 IST
ಅಕ್ಷರ ಗಾತ್ರ

ಶ್ರೀನಗರ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪೀಪಲ್ಸ್‌ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹರಿಹಾಯ್ದಿದ್ದಾರೆ.

ಗೋಡ್ಸೆಯ ಭಾರತದಲ್ಲಿ ಅಪರಾಧಿಗಳು ಮುಕ್ತವಾಗಿ ತಿರುಗುತ್ತಿದ್ದಾರೆ ಎಂದು ಮೆಹಬೂಬಾ ಮುಫ್ತಿ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಪಕ್ಷದ ಯುವ ಘಟಕದ ಮುಖಂಡ ವಹೀದ್ ಪಾರಾ ಸೇರಿದಂತೆ ಸುಳ್ಳು ಆರೋಪದ ಮೇಲೆ ಹಲವರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಆದರೆ, ರೈತರ ಮೇಲೆ ವಾಹನ ಹರಿಸಿದ ಆರೋಪ ಹೊತ್ತಿರುವ ಕೇಂದ್ರ ಸಚಿವರ ಪುತ್ರ ಮುಕ್ತವಾಗಿ ಓಡಾಡುತ್ತಿದ್ದಾರೆ ಎಂದು ಮುಫ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಉಮರ್ ಖಾಲಿದ್, ಫಹಾದ್ ಷಾ, ವಹೀದ್ ಪಾರಾ ಮತ್ತು ಸಿದ್ದಿಕ್ ಕಪನ್ ಅವರು ಸುಳ್ಳು ಆರೋಪದ ಮೇಲೆ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಆದರೆ, ಕೇಂದ್ರ ಸಚಿವರ ಮಗ ರೈತರನ್ನು ಕೊಂದ ಆರೋಪವನ್ನು ಹೊತ್ತಿದ್ದರೂ ಹೊರಗೆ ಬಂದಿದ್ದಾರೆ. ಗೋಡ್ಸೆಯ ಭಾರತದಲ್ಲಿ ಅಪರಾಧಿಗಳು ಮುಕ್ತವಾಗಿ ತಿರುಗುತ್ತಾರೆ. ಸತ್ಯವನ್ನು ಮಾತನಾಡುವವರು ಜೈಲು ಪಾಲಾಗಿದ್ದಾರೆ’ ಎಂದು ಮೆಹಬೂಬಾ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ 3ರಂದು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್‌ ಮಿಶ್ರಾ ಹಾಗೂ ಅವರ ಬೆಂಗಾವಲು ಪಡೆಯ ವಾಹನಗಳು ಹರಿದಿದ್ದವು. ಬಳಿಕ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT