ಪತಿಯೊಂದಿಗೆ ಕಲಹ: ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ನಾಯಕಿ

ಬಂದಾ (ಉತ್ತರ ಪ್ರದೇಶ): ಪತಿಯೊಂದಿಗೆ ಉಂಟಾದ ಕಲಹದಿಂದ ಬೇಸತ್ತ ಬಿಜೆಪಿ ನಾಯಕಿ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿರುವ ಶ್ವೇತಾ ಸಿಂಗ್ ಗೌರ್ ಎಂಬುವವರ ಮೃತದೇಹ ಇಂದಿರಾ ನಗರದ ಅವರ ನಿವಾಸದಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಎಸ್ಪಿ ಅಭಿನಂದನ್ ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಗೌರ್ ಅವರು ತಮ್ಮ ಪತಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದರು. ಇದೇ ವಿಚಾರವಾಗಿ ನಡೆದ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ತನಿಖೆ ಕೈಗೊಂಡಿರುವ ಪೊಲೀಸರು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.