ಗುರುವಾರ , ಮೇ 26, 2022
32 °C

ಬೆಂಬಲಿಗರ ಮನೆಯಲ್ಲಿ ವಾಸ್ತವ್ಯ, ನಲ್ಲಿ ನೀರಿನಲ್ಲಿ ಸ್ನಾನ: ಯುಪಿ ಸಚಿವರ ವಿಡಿಯೊ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಲಖನೌ: ಪಕ್ಷದ ಕಾರ್ಯಕರ್ತರೊಬ್ಬರ ಮನೆಯಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಉತ್ತರ ಪ್ರದೇಶದ ಸಚಿವರೊಬ್ಬರು ಹ್ಯಾಂಡ್ ಪಂಪ್ ಬಳಸಿ ನಲ್ಲಿ ನೀರಿನಲ್ಲಿ ಸ್ನಾನ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಕೈಗಾರಿಕಾ ಅಭಿವೃದ್ಧಿ ಸಚಿವ ನಂದ ಗೋಪಾಲ್ ಗುಪ್ತಾ ‘ನಂದಿ’ ಅವರು ಶಹಜಹಾನ್‌ಪುರ ಜಿಲ್ಲೆಯ ಚಕ್ ಕನ್ಹೌ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಚಿತ್ರೀಕರಿಸಿದ ವಿಡಿಯೊಗಳನ್ನು ಟ್ವೀಟ್ ಮಾಡಿದ್ದಾರೆ. ಅವರು ಹ್ಯಾಂಡ್ ಪಂಪ್ ಬಳಸಿ ನಲ್ಲಿ ನೀರಿನಲ್ಲಿ ಸ್ನಾನ ಮಾಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. 

‘ಇದು ಯೋಗಿ ಸರ್ಕಾರ ಮತ್ತು ಹಿಂದಿನ ಸರ್ಕಾರಗಳ ನಡುವಿನ ವ್ಯತ್ಯಾಸವಾಗಿದೆ. ಯೋಗಿ ಸರ್ಕಾರ ಮತ್ತು ಸಾಮಾನ್ಯ ಜನರ ನಡುವೆ ಯಾವುದೇ ಅಂತರ ಅಥವಾ ಯಾವುದೇ ವ್ಯತ್ಯಾಸವಿಲ್ಲ. ಈ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ ಇಲ್ಲ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. 

ಕಳೆದ ವಾರ ಬರೇಲಿ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗುಪ್ತಾ ಅವರು ಭರತೌಲ್ ಗ್ರಾಮದಲ್ಲಿ ರಾತ್ರಿ ತಂಗಿದ್ದರು. ಅಲ್ಲಿಯೂ ಕೈ ಪಂಪ್‌ನಿಂದ ಎಳೆದ ನೀರಿನಲ್ಲಿ ಸ್ನಾನ ಮಾಡಿದ್ದರು. 

ಹಲವು ಗ್ರಾಮಗಳಿಗೆ ಭೇಟಿ ನೀಡಿದ್ದ ಗುಪ್ತಾ, ಅಭಿವೃದ್ಧಿ ಕಾರ್ಯಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಓದಿ... ಸ್ವಿಮಿಂಗ್‌ ಪೂಲ್‌ನಲ್ಲಿ ಈಜಾಟ: ಹೊಸ ಫೋಟೊ ಹಂಚಿಕೊಂಡ ಕತ್ರಿನಾ –ವಿಕ್ಕಿ ದಂಪತಿ

ಓದಿ... ಹಾಸ್ಯ ನಟ ಮೋಹನ್ ಜುನೇಜ ನಿಧನ: ‘ಕೆಜಿಎಫ್’ ಚಿತ್ರದಲ್ಲಿ ಅಭಿನಯಿಸಿದ್ದ ಕಲಾವಿದ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು