ಶುಕ್ರವಾರ, ಜೂನ್ 25, 2021
30 °C

ಕೊರೊನಾ ಸೋಂಕಿನಿಂದ ಉತ್ತರ ಪ್ರದೇಶ ಸಚಿವ ವಿಜಯ್‌ ಕಶ್ಯಪ್‌ ಸಾವು: ಪ್ರಧಾನಿ ಕಂಬನಿ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಲಕ್ನೋ: ಉತ್ತರ ಪ್ರದೇಶ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್‌ ಕಶ್ಯಪ್‌ ಅವರು ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ.

ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಶ್ಯಪ್‌ ಅವರಿಗೆ 52 ವರ್ಷ ವಯಸ್ಸಾಗಿತ್ತು. ಕೋವಿಡ್‌-19 ಎರಡನೇ ಅಲೆಯಲ್ಲಿ ಸೋಂಕಿನಿಂದ ಮೃತರಾದ ಉತ್ತರ ಪ್ರದೇಶದ ಐದನೇ ಬಿಜೆಪಿ ಶಾಸಕರು ಇವರಾಗಿದ್ದಾರೆ.

ಕಶ್ಯಪ್‌ ಅವರ ಸಾವಿಗೆ ಕಂಬನಿ ಮಿಡಿದಿರುವ ಪ್ರಧಾನಿ ಮೋದಿ, 'ಬಿಜೆಪಿ ಮುಖಂಡ ಹಾಗೂ ಉತ್ತರ ಪ್ರದೇಶ ಸಚಿವ ವಿಜಯ್ ಕಶ್ಯಪ್ ಅವರ ನಿಧನದ ಸುದ್ದಿಯಿಂದ ಬೇಸರವಾಗಿದೆ. ಅವರು ತಮ್ಮ ಜೀವನವನ್ನು ಸಾರ್ವಜನಿಕರಿಗೆ ಮುಡಿಪಾಗಿಟ್ಟಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು' ಎಂದು ಟ್ವೀಟ್‌ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು