ಭಾನುವಾರ, ಜುಲೈ 3, 2022
23 °C

ಉ. ಪ್ರದೇಶ: ಸಚಿವರಿಗೆ ಆಸ್ತಿ ಘೋಷಿಸಲು ಸೂಚಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಉತ್ತರ ಪ್ರದೇಶ ಸರ್ಕಾರದ ಎಲ್ಲ ಸಚಿವರು ಹಾಗೂ ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳು ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿಯನ್ನು ಮೂರು ತಿಂಗಳೊಳಗಾಗಿ ಸರ್ಕಾರದ ಆನ್‌ಲೈನ್‌ ಪೋರ್ಟಲ್‌ನಲ್ಲಿ ಘೋಷಿಸಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೂಚಿಸಿದ್ದಾರೆ.

ಮಂಗಳವಾರದ ಸಂಪುಟ ಸಭೆಯ ಬಳಿಕ ಐಎಎಸ್‌, ಐಪಿಎಸ್‌ ಹಾಗೂ ಪ್ರಾಂತೀಯ ನಾಗರಿಕ ಸೇವಾ ಅಧಿಕಾರಿಗಳೊಡನೆ ವಿಶೇಷ ಸಭೆ ನಡೆಸಿದ ಅವರು, ‘ಸಚಿವರ ಕುಟುಂಬ ಸದಸ್ಯರು ಯಾವುದೇ ಸರ್ಕಾರದ ಕೆಲಸಗಳಲ್ಲಿ ಮೂಗು ತೂರಿಸಬಾರದು. ಆರೋಗ್ಯಕರ ಪ್ರಜಾಪ್ರಭುತ್ವಕ್ಕಾಗಿ ಪ್ರಜಾಪ್ರತಿನಿಧಿಗಳ ಪಾತ್ರ ಬಹುಮುಖ್ಯವಾಗಿರುತ್ತದೆ. ಆದ್ದರಿಂದ ಪ್ರಮಾಣವಚನ ಸ್ವೀಕಾರದ ಬಳಿಕ ಎಲ್ಲ ಸಚಿವರೂ ತಮ್ಮ ಹಾಗೂ ತಮ್ಮ ಕುಟುಂಬದ ಸ್ಥಿರಾಸ್ತಿ ಹಾಗೂ ಚರಾಸ್ತಿಗಳನ್ನು ಆನ್‌ಲೈನ್‌ ಪೋರ್ಟಲ್‌ನಲ್ಲಿ ಘೋಷಿಸಬೇಕು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು