ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಮೇಲೆ ಹರಿದ ಜೀಪು: ಲಖಿಂಪುರ ಖೇರಿಯ 7 ಕ್ಷೇತ್ರಗಳು ಬಿಜೆಪಿ ಪಾಲಿಗೆ

Last Updated 11 ಮಾರ್ಚ್ 2022, 7:49 IST
ಅಕ್ಷರ ಗಾತ್ರ

ಲಖನೌ: ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಜೀಪು ಹರಿಸಿ ಕೊಂದ ಪ್ರಕರಣವು ಈ ಚುನಾವಣೆಯಲ್ಲಿ ಯಾವುದೇ ಪ್ರಭಾವ ಬೀರಿದಂತೆ ಕಾಣುವುದಿಲ್ಲ. ಏಕೆಂದರೆ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಭದ್ರಕೋಟೆಯಾದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ.

ಲಖಿಂಪುರ ಖೇರಿಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಈ ಪೈಕಿ 7 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ವಿಜಯ ಸಾಧಿಸಿದ್ದಾರೆ.

ರೈತರನ್ನು ಕೊಂದ ಪ್ರಕರಣದಲ್ಲಿ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಪ್ರಮುಖ ಆರೋಪಿಯಾಗಿದ್ದಾರೆ. ಈ ಕ್ಷೇತ್ರಗಳಲ್ಲಿ ಮತದಾನ ನಡೆಯುವುದಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಆಶಿಶ್ ಮಿಶ್ರಾ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಬೆಳವಣಿಗೆಯು ಬಿಜೆಪಿ ವಿರುದ್ಧ ಕೆಲಸ ಮಾಡುತ್ತದೆ ಎಂದು ಎಣಿಸಲಾಗಿತ್ತು. ಆದರೆ ಅದು ಕೆಲಸ ಮಾಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT