ಶನಿವಾರ, ಮೇ 21, 2022
27 °C

ಉ.ಪ್ರದೇಶ ಚುನಾವಣೆ | ₹10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಪ್ರಿಯಾಂಕಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಶ್ವಾಸನೆ ನೀಡುವುದನ್ನು ಮುಂದುವರಿಸಿರುವ  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ₹10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.

‘ಕೋವಿಡ್ ಪಿಡುಗಿನ ಅವಧಿಯಲ್ಲಿ ರಾಜ್ಯದ ಆರೋಗ್ಯ ವ್ಯವಸ್ಥೆ ಹೇಗಿತ್ತು ಎಂದು ಎಲ್ಲರೂ ನೋಡಿದ್ದಾರೆ. ಸರ್ಕಾರದ ನಿರ್ಲಕ್ಷ್ಯವೇ ಇದಕ್ಕೆಲ್ಲ ಕಾರಣ. ಈ ಹಿನ್ನೆಲೆಯಲ್ಲಿ ಜನರಿಗೆ ಉತ್ತಮ ಹಾಗೂ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡುವುದಕ್ಕಾಗಿ ನಮ್ಮ ಪಕ್ಷ ಅಧಿಕಾರಿಕ್ಕೆ ಬಂದರೆ, ಚುನಾವಣಾ ಪ್ರಣಾಳಿಕೆ ಸಮಿತಿಯ ಒಪ್ಪಿಗೆಯೊಂದಿಗೆ ₹10 ಲಕ್ಷದವರೆಗೂ ಉಚಿತ ವೈದ್ಯಕೀಯ ಸೌಲಭ್ಯ ನೀಡಲು ಪಕ್ಷ ನಿರ್ಧರಿಸಿದೆ‘ ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಬಾರಾಬಂಕಿಯಲ್ಲಿ ಶನಿವಾರ ಪಕ್ಷದ ‘ಪ್ರತಿಜ್ಞಾ ಯಾತ್ರೆ‘ಗೆ ಚಾಲನೆ ನೀಡಿದ್ದ ಅವರು, ರೈತರ ಸಾಲ ಮನ್ನಾ, 20 ಲಕ್ಷ ಜನರಿಗೆ ಉದ್ಯೋಗ ಸಹಿತ ಏಳು ಭರವಸೆಗಳನ್ನು ನೀಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು