ಭಾನುವಾರ, ಮೇ 29, 2022
23 °C

ಉತ್ತರ ಪ್ರದೇಶ: ರಾಯ್‌ಬರೇಲಿ ಶಾಸಕಿ ಅದಿತಿ ಸಿಂಗ್‌ ಕಾಂಗ್ರೆಸ್‌ಗೆ ರಾಜೀನಾಮೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ರಾಯ್‌ಬರೇಲಿ: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳು ಚುರುಕುಗೊಂಡಿರುವಂತೆಯೇ ರಾಯ್‌ಬರೇಲಿ ಕ್ಷೇತ್ರದ ಶಾಸಕಿ ಅದಿತಿ ಸಿಂಗ್‌ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿಂಗ್‌ ಅವರು ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್‌ 10ರಂದು ಫಲಿತಾಂಶ ಪ್ರಕಟವಾಗಲಿದೆ. ಏಳು ಹಂತಗಳ ಮತದಾನವು ಕ್ರಮವಾಗಿ ಫೆಬ್ರವರಿ 10, 14, 20, 23, 27, ಮಾರ್ಚ್‌ 3 ಮತ್ತು 7 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕಾಂಗ್ರೆಸ್‌ ಪಕ್ಷವು ಕಳೆದ 30 ವರ್ಷಗಳಿಂದಲೂ ರಾಜ್ಯದಲ್ಲಿ ಅಧಿಕಾರದಲ್ಲಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.

ಕಳೆದ (2017ರ) ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 312 ಸ್ಥಾನಗಳಲ್ಲಿ ಗೆದ್ದು ಭಾರೀ ಬಹುಮತ ಸಾಧಿಸಿತ್ತು. ಉಳಿದಂತೆ ಅಖಿಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷವು 47 ಕಡೆ ಹಾಗೂ ಮಾಯಾವತಿ ನೇತೃತ್ವದ ಬಿಎಸ್‌ಪಿ 19 ಕ್ಷೇತ್ರಗಳಲ್ಲಿ ಜಯ ಕಂಡಿದ್ದವು. ಕಾಂಗ್ರೆಸ್‌ ಏಳು ಸ್ಥಾನಗಳಲ್ಲಿ ಮಾತ್ರವೇ ಜಯದ ನಗೆ ಬೀರಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು