ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಥುರಾ| ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ: ಒಂದೇ ಕುಟುಂಬದ ಏಳು ಜನರ ಸಾವು

Last Updated 7 ಮೇ 2022, 11:11 IST
ಅಕ್ಷರ ಗಾತ್ರ

ಮಥುರಾ: ಇಲ್ಲಿನ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಜನರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಹರ್ದೋಯಿಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನೋಯ್ಡಾಕ್ಕೆ ಹಿಂತಿರುಗುತ್ತಿದ್ದರು. ಅವರಿದ್ದ ಕಾರು ಮುಂದಿದ್ದ ವಾಹನವೊಂದಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಎಸ್ಪಿ ಶ್ರೀಶ ಚಂದ್ರ ಹೇಳಿದ್ದಾರೆ.

‘ಇವರಿದ್ದ ಕಾರು ಅತಿವೇಗವಾಗಿ ಚಲಿಸುತ್ತಿತ್ತು. ಮುಂದಿದ್ದ ವಾಹನವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟರು’ ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿ ಶೋಕ: ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಅಪಘಾತ ಸಂಭವಿಸಿ, ಏಳು ಜನರು ಮೃತಪಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT