ಮಂಗಳವಾರ, ಡಿಸೆಂಬರ್ 7, 2021
24 °C

ಉತ್ತರ ಪ್ರದೇಶ: ವೇಗವಾಗಿ ಬಂದ ಟ್ರಕ್‌ ಡಿಕ್ಕಿಯಾಗಿ ಗಾಂಧಿ ಪ್ರತಿಮೆಗೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಡ, ಉತ್ತರ ಪ್ರದೇಶ: ಶನಿವಾರ ನಸುಕಿನ ಜಾವ ವೇಗವಾಗಿ ಬಂದ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಇಲ್ಲಿಯ ಅಟ್ಟಾರ ಪಟ್ಟಣ ಪ್ರದೇಶದಲ್ಲಿಯ ಗಾಂಧಿ ಪ್ರತಿಮೆಗೆ ಜಖಂಗೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ. 

ಪೊಲೀಸರು ಈ ಸಂಬಂಧ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ವಾಹನವನ್ನು ಸುಪರ್ದಿಗೆ ಪಡೆದಿದ್ದಾರೆ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ (ಎಎಸ್‌ಪಿ) ಲಕ್ಷ್ಮಿ ನಿವಾಸ್‌ ಮಿಶ್ರಾ ಹೇಳಿದರು.

ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಟ್ಟಾರ ಪೊಲೀಸ್‌ ಠಾಣೆಯ ವೀರ್‌ ಪ್ರತಾಪ್‌ ಸಿಂಗ್‌ ಚೌಹಾಣ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು