ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ: ಶಿಕ್ಷಕರಿಗೆ ಕೋವಿಡ್, 84 ಶಾಲೆಗಳು ಮತ್ತೆ ಬಂದ್

Last Updated 6 ನವೆಂಬರ್ 2020, 6:28 IST
ಅಕ್ಷರ ಗಾತ್ರ

ಡೆಹ್ರಾಡೂನ್: 80 ಶಿಕ್ಷಕರಿಗೆ ಕೋವಿಡ್–19 ದೃಢಪಟ್ಟ ಕಾರಣ ಉತ್ತರಾಖಂಡದ ಪೌರಿ ಜಿಲ್ಲೆಯ 84 ಶಾಲೆಗಳನ್ನು ಮತ್ತೆ ಮುಚ್ಚಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ನವೆಂಬರ್ 2ರಂದು ಶಾಲೆಗಳನ್ನು ಪುನರಾರಂಭಿಸಲಾಗಿತ್ತು.

ಸೋಂಕಿಗೀಡಾದ ಶಿಕ್ಷಕರು ಪೌರಿ ಜಿಲ್ಲೆಯ ಖಿರ್ಸು, ಪೌರಿ, ಕೋಟ್, ಪಬು ಹಾಗೂ ಕಲ್ಜಿಖಲ್‌ನ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಎಲ್ಲ ಶಿಕ್ಷಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಎಲ್ಲ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ ವಿಚಾರವಾಗಿ ಶಿಕ್ಷಣ ಇಲಾಖೆಯು ಸ್ಟಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್‌ (ಎಸ್ಒಪಿ) ಬಿಡುಗಡೆ ಮಾಡಿದೆ ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ಅಮಿತ್ ನೇಗಿ ತಿಳಿಸಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಿಕೆ ತಡೆಯವ ನಿಟ್ಟಿನಲ್ಲಿ ಮಾರ್ಚ್‌ನಿಂದ ಮುಚ್ಚಲಾಗಿದ್ದ ಶಾಲೆಗಳನ್ನು ಕೆಲವು ರಾಜ್ಯಗಳು ಇತ್ತೀಚೆಗೆ ಆರಂಭಿಸಿವೆ. ಅಸ್ಸಾಂನಲ್ಲಿಯೂ ಕೆಲ ದಿನಗಳ ಹಿಂದೆ ಶಾಲೆಗಳು ಪುನರಾರಂಭಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT