ಮಂಗಳವಾರ, ಆಗಸ್ಟ್ 16, 2022
29 °C
ಸಿಎಂ ಸ್ಥಾನಕ್ಕೆ ರಮೇಶ್ ಪೊಖ್ರಿಯಾಲ್ ಸೇರಿ ಹಲವು ನಾಯಕರ ಹೆಸರುಗಳು

ಸೋತರೂ ಪುಷ್ಕರ್ ಸಿಂಗ್ ಧಾಮಿಯೇ ಉತ್ತರಾಖಂಡದ ಮುಖ್ಯಮಂತ್ರಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೋತಿದ್ದರೂ, ಅವರನ್ನೇ ಉತ್ತರಾಖಂಡದ  ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಲಾಗುತ್ತದೆ ಎನ್ನಲಾಗಿದೆ.

ಬಿಜೆಪಿ ಹೈಕಮಾಂಡ್ ಧಾಮಿ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಬಹುದು. ಜತೆಗೆ ರಾಜ್ಯದ ಕೆಲ ಬಿಜೆಪಿ ನಾಯಕರು ಧಾಮಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂಬ ಆಕಾಂಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಆದರೆ, ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಯುವ ಮುಖಂಡರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಘೋಷಣೆ ಮಾಡಿದ್ದರು. ಆದರೆ, ಅವರು ಯಾರು ಎಂಬುದು ಇನ್ನೂ ಗೊತ್ತಾಗಿಲ್ಲ. 

ಧಾಮಿ ಅವರಲ್ಲದೆ ಸಂಸದರಾದ ರಮೇಶ್ ನಿಶಾಂಕ್ ಪೊಖ್ರಿಯಾಲ್, ಬಿಜೆಪಿ ಮಾಧ್ಯಮ ಮುಖ್ಯಸ್ಥ ಅನಿಲ್ ಬಲೂನಿ, ರಾಜ್ಯ ಸಚಿವರಾದ ಅಜಯ್ ಭಟ್, ಧನ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ ಹಾಗೂ ಅರವಿಂದ್ ಪಾಂಡೆ ಅವರ ಹೆಸರುಗಳು ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿಬರುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು