ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು

Last Updated 20 ಮಾರ್ಚ್ 2022, 19:32 IST
ಅಕ್ಷರ ಗಾತ್ರ

ನವದೆಹಲಿ: ಉತ್ತರಾಖಂಡದ ಮುಖ್ಯಮಂತ್ರಿ ಯಾರಾಗಬೇಕು ಎಂದು ನಿರ್ಧರಿಸುವ ಸಲುವಾಗಿ ರಾಜ್ಯದ ಬಿಜೆಪಿ ಶಾಸಕರುಡೆಹ್ರಾಡೂನ್‌ನಲ್ಲಿ ಸೋಮವಾರ ಸಭೆ ನಡೆಸಲಿದ್ದಾರೆ.

ರಾಜ್ಯದ ಉಸ್ತುವಾರಿ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ, ಮಾಜಿ ಮುಖ್ಯಮಂತ್ರಿಗಳಾದ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌, ತ್ರಿವೇಂದ್ರ ಸಿಂಗ್‌ ರಾವತ್‌ ಮತ್ತಿತರರು ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ,ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರನ್ನು ಭೇಟಿ ಆಗಿದ್ದರು. ಭೇಟಿ ವೇಳೆ ಸಭೆ ನಡೆಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಉತ್ತರಾಖಂಡ ಬಿಜೆಪಿ ಮುಖ್ಯಸ್ಥ ಮದನ್‌ ಕೌಶಿಕ್‌ ಹೇಳಿದ್ದಾರೆ.

ಉತ್ತರಾಖಂಡದ ವೀಕ್ಷಕರಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಅವರನ್ನು ನಿಯೋಜಿಸಲಾಗಿದೆ. ಬಿಜೆಪಿಯನ್ನು ಗೆಲುವಿನ ಕಡೆ ಮುನ್ನಡೆಸಿದ ಮುಖ್ಯಮಂತ್ರಿ ಧಾಮಿ ಅವರು ತಾವು ಸ್ಪರ್ಧಿಸಿದ್ದ ಖತಮಿ ಕ್ಷೇತ್ರದಲ್ಲಿ ಸೋತರು. ಧಾಮಿ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿ ಎಂದುಪಕ್ಷದ ಒಂದು ವರ್ಗ ಬಯಸುತ್ತಿದೆ. ಆದರೆ ಮತ್ತೊಂದು ವರ್ಗ ಮುಖ್ಯಮಂತ್ರಿ ಬದಲಾವಣೆಯನ್ನು ಬಯಸಿದೆ.

ಚುನಾವಣೆಯಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT