ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ ಬಿಜೆಪಿ ಶಾಸಕ ಕೋವಿಡ್‌ನಿಂದ ಸಾವು

Last Updated 12 ನವೆಂಬರ್ 2020, 3:32 IST
ಅಕ್ಷರ ಗಾತ್ರ

ನವದೆಹಲಿ: ಉತ್ತರಾಖಂಡ ರಾಜ್ಯದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ ಅವರು ಗುರುವಾರ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಕಳೆದ 15 ದಿನಗಳ ಹಿಂದೆ ಸುರೇಂದ್ರ ಸಿಂಗ್ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿತ್ತು. ಇವರು ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಗುರುವಾರ ಬೆಳಗ್ಗೆ ಸುರೇಂದ್ರ ಸಿಂಗ್ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಸುರೇಂದ್ರ ಸಿಂಗ್ ಅವರು ಉತ್ತರಾಖಂಡ ರಾಜ್ಯದ ಅಲ್ಮೋರಾ ಜಿಲ್ಲೆಯ ಸಾಲ್ಟ್‌ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಕೆಳ ದಿನಗಳ ಹಿಂದಷ್ಟೆ ಇವರ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT