ಗುರುವಾರ , ಮೇ 26, 2022
28 °C

ಪಕ್ಷ ವಿರೋಧಿ ಚಟುವಟಿಕೆ: ಉತ್ತರಾಖಂಡ ಸಚಿವರನ್ನು ಉಚ್ಛಾಟಿಸಿದ ಬಿಜೆಪಿ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

Chief Minister Pushkar Singh Dhami took the action against Rawat. Credit: Twitter/@drhsrawatuk

ನವದೆಹಲಿ: ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಉತ್ತರಾಖಂಡದ ಸಚಿವ ಹರಾಕ್ ಸಿಂಗ್ ರಾವತ್ ಅವರನ್ನು ಬಿಜೆಪಿ ಪಕ್ಷದ ಸದಸ್ಯತ್ವದಿಂದ ಆರು ವರ್ಷದ ಅವಧಿಗೆ ಉಚ್ಛಾಟಿಸಿದೆ.

ರಾವತ್ ಅವರು ತಮ್ಮ ಪತ್ನಿ ಸಹಿತ ಕುಟುಂಬದ ಮೂವರಿಗೆ ವಿಧಾನಸಭೆ ಚುನಾವಣೆಯ ಟಿಕೆಟ್ ಬಯಸಿದ್ದರು, ಆದರೆ ಪಕ್ಷದಿಂದ ಒಂದು ಕುಟುಂಬಕ್ಕೆ ಒಂದು ಹುದ್ದೆ ಮಾತ್ರ ಎನ್ನುವ ನಿಯಮವನ್ನು ಅವರು ಮರೆತಿದ್ದರು ಎಂದು ಬಿಜೆಪಿ ಮೂಲಗಳು ಹೇಳಿವೆ.

2017ರ ವಿಧಾನಸಭಾ ಚುನಾವಣೆಗೂ ಮುನ್ನ ರಾವತ್ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ, ಪಕ್ಷದ ಟಿಕೆಟ್ ಪಡೆದುಕೊಂಡಿದ್ದರು. ನಂತರ ಸಂಪುಟದಲ್ಲಿ ಸ್ಥಾನ ಪಡೆದಿದ್ದರು.

ಈ ಬಾರಿ ಪಕ್ಷದಿಂದ ಹೊರಹಾಕಲ್ಪಟ್ಟ ಬಳಿಕ ಅವರು ಮತ್ತೆ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.

ರಾವತ್ ಜತೆಗೆ ಅವರ ಸೊಸೆ ಕೂಡ ಸೋಮವಾರ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಶನಿವಾರ ನಡೆದ ಬಿಜೆಪಿ ಸಭೆಗೆ ಗೈರಾಗಿದ್ದ ರಾವತ್, ಭಾನುವಾರ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರನ್ನು ಭೇಟಿಯಾಗಿದ್ದರು. ಅದರ ಬೆನ್ನಲ್ಲೇ ಬಿಜೆಪಿ ರಾವತ್ ವಿರುದ್ಧ ಶಿಸ್ತುಕ್ರಮ ಕೈಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು