ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ | ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ; ರಕ್ಷಣೆಗೆ ಧಾವಿಸಿದ ಎಸ್‌ಡಿಆರ್‌ಎಫ್

Last Updated 20 ಆಗಸ್ಟ್ 2022, 4:26 IST
ಅಕ್ಷರ ಗಾತ್ರ

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯ ರಾಯ್‌ಪುರದ ಸರ್‌ಖೆತ್ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಮೇಘಸ್ಫೋಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ. ಶುಕ್ರವಾರ ತಡರಾತ್ರಿ 2.45ರ ಹೊತ್ತಿಗೆ ಮೇಘಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿರುವುದಾಗಿ ವರದಿ ಮಾಡಿದೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆ ನೇತೃತ್ವ ವಹಿಸಿತು.

ಗ್ರಾಮದಲ್ಲಿ ಸಿಲುಕಿದ್ದ ಎಲ್ಲ ಜನರನ್ನು ಸಮೀಪದ ರೆಸಾರ್ಟ್‌ಗೆ ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ.

ಉತ್ತರಾಖಂಡದಲ್ಲಿ ಶುಕ್ರವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಡೆಹ್ರಾಡೂನ್‌ನ ತಪಕೇಶ್ವರ ಮಹಾದೇವ ದೇಗುಲದ ಸಮೀಪದಲ್ಲಿರುವ ತಮಸಾ ನದಿಯು ಉಕ್ಕಿ ಹರಿಯುತ್ತಿದೆ. ಆದರೆ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

ಈ ಕುರಿತು ಎಎನ್‌ಐ ವಿಡಿಯೊ ಹಂಚಿದ್ದು, ತಪಕೇಶ್ವರ ಮಹಾದೇವ ದೇಗುಲದಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT