ಮಂಗಳವಾರ, ಮೇ 17, 2022
26 °C

ಉತ್ತರಾಖಂಡ ಪ್ರವಾಹ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತದಿಂದಾಗಿ ಉಂಟಾದ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ತಲಾ ₹ 2 ಲಕ್ಷ ಪರಿಹಾರವನ್ನು ನೀಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅನುಮೋದನೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ ಭಾನುವಾರ ತಿಳಿಸಿದೆ.

ಪ್ರವಾಹದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ₹ 50,000 ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ನಂದಾ ದೇವಿ ಹಿಮನದಿಯ ಒಂದು ಭಾಗದಲ್ಲಿ ಹಿಮಪಾತವಾಗಿ, ಅಲಕಾನಂದ ನದಿಯು ಉಕ್ಕಿ ಹರಿದು ಜಲವಿದ್ಯುತ್ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿದ್ದ 100 ಕ್ಕೂ ಹೆಚ್ಚು ಕಾರ್ಮಿಕರು ಕಣ್ಮರೆಯಾಗಿದ್ದಾರೆ.

ಇದನ್ನೂ ಓದಿ: 

ಈ ಕುರಿತು ಟ್ವೀಟ್ ಮಾಡಿರುವ ಪಿಎಂಒ, ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತದಿಂದಾಗಿ ಉಂಟಾದ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಪಿಎಂಎನ್‌ಆರ್‌ಎಫ್ (ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ) ಯಿಂದ ತಲಾ ₹ 2 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ₹ 50,000 ಗಳನ್ನು ನೀಡುವುದಾಗಿ ತಿಳಿಸಿದೆ.

ಗಂಗಾ ನದಿಯ ಎಲ್ಲಾ ಸಂಕೀರ್ಣ ಉಪನದಿಗಳಾದ ಧೌಲಿ ಗಂಗಾ, ರಿಷಿ ಗಂಗಾ ಮತ್ತು ಅಲಕಾನಂದ ನದಿಗಳಲ್ಲಿ ಹಠಾತ್ ಪ್ರವಾಹ ಉಂಟಾಗಿ ಎತ್ತರದ ಪ್ರದೇಶಗಳಲ್ಲಿ ವ್ಯಾಪಕ ಭೀತಿ ಮತ್ತು ದೊಡ್ಡ ಪ್ರಮಾಣದ ವಿನಾಶಕ್ಕೆ ಕಾರಣವಾಯಿತು.

ಇದನ್ನೂ ಓದಿ: 

ಸಂತ್ರಸ್ತ ಕುಟುಂಬಗಳಿಗೆ 4 ಲಕ್ಷ ಪರಿಹಾರ

ಉತ್ತರಾಖಂಡದಲ್ಲಿ ಸಂಭವಿಸಿದ ವಿನಾಶದ ಬಗ್ಗೆ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಪತ್ರಿಕಾಗೋಷ್ಠಿಯಲ್ಲಿ ಐಟಿಬಿಪಿ ಮತ್ತು ಎಸ್‌ಡಿಆರ್‌ಎಫ್ ತಂಡ ಜನರನ್ನು ರಕ್ಷಿಸುವಲ್ಲಿ ತೊಡಗಿದೆ ಎಂದು ಹೇಳಿದರು. ಅಲ್ಲದೆ, ಸಂತ್ರಸ್ತರ ಕುಟುಂಬಗಳಿಗೆ ತಲಾ ₹ 4 ಲಕ್ಷ ಪರಿಹಾರವನ್ನು ಸಿಎಂ ಘೋಷಿಸಿದರು.

ಇದನ್ನೂ ಓದಿ:  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು