ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ ನೀರ್ಗಲ್ಲು ಕುಸಿತ: ಸಾವಿನ ಸಂಖ್ಯೆ 32ಕ್ಕೆ ಏರಿಕೆ, 206 ಜನರು ನಾಪತ್ತೆ

Last Updated 10 ಫೆಬ್ರುವರಿ 2021, 5:44 IST
ಅಕ್ಷರ ಗಾತ್ರ

ಡೆಹ್ರಾಡೂನ್‌: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿದು ನದಿಯಲ್ಲಿ ಪ್ರವಾಹ ಉಂಟಾದ ಪರಿಣಾಮ ಇದುವರೆಗೆ 32 ಜನರು ಮೃತಪಟ್ಟಿದ್ದು, ಸುಮಾರು 206 ಜನರು ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ತಪೋವನ- ವಿಷ್ಣುಗಡ ಯೋಜನೆಯ ಸುರಂಗದಲ್ಲಿ ಸಿಲುಕಿಕೊಂಡಿದ್ದ ಸುಮಾರು 32 ಕಾರ್ಮಿಕರನ್ನು ರಕ್ಷಿಸಲಾಗಿದೆ. ಎನ್‌ಟಿಪಿಸಿಯ 480 ಮೆಗಾವಾಟ್ ಸಾಮರ್ಥ್ಯದ ತಪೋವನ-ವಿಷ್ಣುಗಡ ಯೋಜನೆ ಮತ್ತು 13.2 ಮೆಗಾವಾಟ್ ಸಾಮರ್ಥ್ಯದ ರಿಷಿ ಗಂಗಾ ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ನೀರು ನುಗ್ಗಿದ್ದು, ಅಪಾರ ಹಾನಿ ಸಂಭವಿಸಿದೆ.

ಹಿಮಕುಸಿತ ಸಂಭವಿಸಿದ ಪರಿಣಾಮ ಸುಮಾರು 13 ಹಳ್ಳಿಗಳು ಹೊರಗಿನ ಸಂಪರ್ಕ ಕಳೆದುಕೊಂಡಿವೆ. ಹಳ್ಳಿಗಳನ್ನು ಸಂಪರ್ಕಿಸುವ ಸೇತುವೆಗಳು ಕೊಚ್ಚಿಹೋಗಿದ್ದು, ಜನರಿಗೆ ಆಹಾರ ಸಾಮಗ್ರಿಗಳನ್ನು ತಲುಪಿಸಲು ಹೆಲಿಕಾಪ್ಟರ್‌ಗಳನ್ನು ಬಳಸುವ ಅನಿವಾರ್ಯತೆ ಸರ್ಕಾರಕ್ಕೆ ಬಂದೊದಗಿದೆ.

ವಿಪತ್ತಿಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಹವಾಮಾನ ವೈಪರೀತ್ಯದಿಂದ ಹೀಗಾಗಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಅಧ್ಯಯನಕ್ಕಾಗಿ ವಿಜ್ಞಾನಿಗಳ ತಂಡವೊಂದು ಚಮೋಲಿಗೆ ತೆರಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT