ಗುರುವಾರ , ಮೇ 19, 2022
23 °C

ಉತ್ತರಾಖಂಡ ದುರಂತ; 41 ಮೃತದೇಹಗಳು ಪತ್ತೆ; ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಚಮೋಲಿ (ಉತ್ತರಾಖಂಡ): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿತದಿಂದ ಉಂಟಾದ ಪ್ರವಾಹ ದುರುಂತದಲ್ಲಿ ಇದುವರೆಗೆ 41 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಪೋವನ ಸುರಂಗದ ಅವಶೇಷಗಳ ಅಡಿಯಿಂದ ಮತ್ತೆ ಎರಡು ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ಭಾನುವಾರ ತಿಳಿಸಿದ್ದಾರೆ.

ಫೆಬ್ರುವರಿ 7 ಭಾನುವಾರದಂದು ಉತ್ತರಾಖಂಡದ ಚಮೋಲಿ ಜಿಲ್ಲೆಯ ತಪೋವನ-ರೈನಿ ಪ್ರದೇಶದಲ್ಲಿ ನೀರ್ಗಲ್ಲು ಕುಸಿತದ ಪರಿಣಾಮ ಧೌಲಿಗಂಗಾ ಹಾಗೂ ಅಲಂಕಾನಂದ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾಗಿತ್ತು. ಪ್ರವಾಹದ ತೀವ್ರತೆಗೆ ರಿಷಿಗಂಗಾ ವಿದ್ಯುತ್ ಯೋಜನೆ ಹಾನಿಗೊಳಗಾಗಿತ್ತು.

ಇದನ್ನೂ ಓದಿ: 

ದುರಂತದ ಬೆನ್ನಲ್ಲೇ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದರೂ ಈಗಲೂ 163 ಮಂದಿ ಸಾಪತ್ತೆಯಾಗಿದ್ದಾರೆ. ಇದರಿಂದ ಪ್ರವಾಹಕ್ಕೆ ಸಿಲುಕಿದವರು ಬದುಕುಳಿದಿರುವ ಸಾಧ್ಯತೆ ಕ್ಷೀಣವೆನಿಸಿದೆ.

 

 

 

ಬಹುತೇಕ ಮೃತದೇಹಗಳನ್ನು ಗುರುತು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಉತ್ತರಾಖಂಡ ರಾಜ್ಯ ವಿಪತ್ತು ನಿರ್ಹಹಣಾ ಪಡೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ತಪೋವನ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ವೇಳೆ ಇನ್ನೆರಡು ಮೃತದೇಹಗಳನ್ನು ಪತ್ತೆ ಹಚ್ಚಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ ಎಂದು ಚಮೋಲಿ ಜಿಲ್ಲಾಧಿಕಾರಿ ಸ್ವಾತಿ ಭದೋರಿಯಾ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು