ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ ನೀರ್ಗಲ್ಲು ಕುಸಿತ: 26 ಮೃತದೇಹ ಪತ್ತೆ: 171 ಜನ ನಾಪತ್ತೆ

ನೀರ್ಗಲ್ಲು ಕುಸಿತ: ಅಧ್ಯಯನಕ್ಕೆ ವಿಜ್ಞಾನಿಗಳ ತಂಡ
Last Updated 8 ಫೆಬ್ರುವರಿ 2021, 19:49 IST
ಅಕ್ಷರ ಗಾತ್ರ

ಡೆಹ್ರಾಡೂನ್ : ‘ಉತ್ತರಾ ಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿದು ಸಂಭವಿಸಿದ ನದಿ ಪ್ರವಾಹದ ನಂತರ ನಡೆಯುತ್ತಿರುವ ಶೋಧ ಕಾರ್ಯದಲ್ಲಿ ಸೋಮವಾರ ರಾತ್ರಿ ವೇಳೆಗೆ 26 ಶವಗಳನ್ನು ಪತ್ತೆ ಮಾಡಲಾಗಿದೆ. ಇನ್ನೂ 171 ಮಂದಿ ಕಣ್ಮರೆಯಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯುತ್ ಯೋಜನಾ ಸ್ಥಳದ ಸುರಂಗದಲ್ಲಿ ಸಿಲುಕಿರುವ ಕನಿಷ್ಠ 30 ಕಾರ್ಮಿಕರನ್ನು ರಕ್ಷಿಸಲಾಗಿದೆ.

ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ. ಕಾಣೆಯಾದವರಲ್ಲಿ ಜಲವಿದ್ಯುತ್ ಯೋಜನಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಹಾಗೂ ಹತ್ತಿರದ ಗ್ರಾಮಸ್ಥರು ಇದ್ದಾರೆ. ಅವರ ಮನೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಟಿಪಿಸಿಯ 480 ಮೆಗಾವಾಟ್ ಸಾಮರ್ಥ್ಯದ ತಪೋವನ-ವಿಷ್ಣುಗಡ ಯೋಜನೆ ಮತ್ತು 13.2 ಮೆಗಾವಾಟ್ ಸಾಮರ್ಥ್ಯದ ರಿಷಿ ಗಂಗಾ ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ನೀರು ನುಗ್ಗಿದ್ದು, ಅಪಾರ ಹಾನಿ ಸಂಭವಿಸಿದೆ.

ವಿಜ್ಞಾನಿಗಳ ತಂಡ: ವಿಪತ್ತಿಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಹವಾಮಾನ ವೈಪರೀತ್ಯದಿಂದ ಹೀಗಾಗಿದೆ ಎಂದು ತಜ್ಞರು ಅಂದಾಜಿಸಿ
ದ್ದಾರೆ. ಅಧ್ಯಯನಕ್ಕಾಗಿ ವಿಜ್ಞಾನಿಗಳ ತಂಡವೊಂದು ಚಮೋಲಿಗೆ ತೆರಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT