ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಕನ್ವರ್‌ ಯಾತ್ರೆ ರದ್ದುಪಡಿಸಿದ ಉತ್ತರಾಖಂಡ ಸರ್ಕಾರ

Last Updated 13 ಜುಲೈ 2021, 16:37 IST
ಅಕ್ಷರ ಗಾತ್ರ

ಡೆಹ್ರಾಡೂನ್‌: ಕೋವಿಡ್‌–19 ಪಿಡುಗಿನ ಸಂಭಾವ್ಯ 3ನೇ ಅಲೆಯ ಕಾರಣದಿಂದಾಗಿ ಈ ವರ್ಷದ ಕನ್ವರ್‌ ಯಾತ್ರೆಯನ್ನು ರದ್ದುಗೊಳಿಸಿ ಉತ್ತರಾಖಂಡ ಸರ್ಕಾರ ಮಂಗಳವಾರ ಆದೇಶಿಸಿದೆ ಎಂದು ಮೂಲಗಳು ಹೇಳಿವೆ.

‘ಕನ್ವರ್‌ ಯಾತ್ರೆ ನಮ್ಮ ಸನಾತನ ಸಂಸ್ಕೃತಿಯ ಭಾಗವಾಗಿದ್ದರೂ, ಕೋವಿಡ್‌ ಪಿಡುಗಿನ ಈ ಸಮಯದಲ್ಲಿ ಜನರ ಪ್ರಾಣ ರಕ್ಷಣೆಯೇ ಮುಖ್ಯ’ ಎಂದು ಮುಖ್ಯಮಂತ್ರಿ ಪುಷ್ಕರ್‌ಸಿಂಗ್ ಧಾಮಿ ಹೇಳಿದ್ದಾರೆ.

ರಾಜ್ಯ ಹಾಗೂ ದೇಶದ ಜನರ ಹಿತದೃಷ್ಟಿಯಿಂದ ಈ ಯಾತ್ರೆಗೆ ಅನುಮತಿ ನೀಡಬಾರದು ಎಂದು ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಇತ್ತೀಚೆಗೆ ಮುಖ್ಯಮಂತ್ರಿ ಪುಷ್ಕರ್‌ಸಿಂಗ್ ಧಾಮಿ ಅವರಿಗೆ ಪತ್ರ ಬರೆದಿತ್ತು.

ಕೋವಿಡ್‌ ಕಾರಣದಿಂದ ಕಳೆದ ವರ್ಷವೂ ಈ ಯಾತ್ರೆಯನ್ನು ರದ್ದುಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT