ಗುರುವಾರ , ಜನವರಿ 27, 2022
21 °C

ಉತ್ತರಾಖಂಡ: ಜಡ್ಜ್, ಇತರೆ ನಾಲ್ವರಿಗೆ ಕೋವಿಡ್; ಹೈಕೋರ್ಟ್ ಭೌತಿಕ ವಿಚಾರಣೆ ಸ್ಥಗಿತ

ಪಿಟಿಐ Updated:

ಅಕ್ಷರ ಗಾತ್ರ : | |

ನೈನಿತಾಲ್: ನ್ಯಾಯಾಧೀಶರು ಮತ್ತು ನ್ಯಾಯಾಲಯದ ಇತರ ನಾಲ್ವರು ಸಿಬ್ಬಂದಿಗೆ ಕೋವಿಡ್-19 ದೃಢಪಟ್ಟಿದ್ದು, ಉತ್ತರಾಖಂಡದ ಹೈಕೋರ್ಟ್ ಭೌತಿಕ ವಿಚಾರಣೆಯನ್ನು ಸ್ಥಗಿತಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ವಿಷಯಗಳನ್ನು ವರ್ಚುವಲ್ ಆಗಿಯೇ ವಿಚಾರಣೆ ನಡೆಸಲಾಗುತ್ತದೆ ಎಂದು ಹೈಕೋರ್ಟ್ ಅಧಿಕಾರಿ ತಿಳಿಸಿದ್ದಾರೆ.

ಈ ಐವರ ಹೊರತಾಗಿ, ನಾಲ್ವರು ನೈನಿತಾಲ್ ನಿವಾಸಿಗಳಿಗೆ ಕೂಡ ಶುಕ್ರವಾರ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಈ ಎಲ್ಲಾ ಸೋಂಕಿತರು ಲಕ್ಷಣರಹಿತರಾಗಿದ್ದರೂ ಕೂಡ ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ, ಹೈಕೋರ್ಟ್‌ನಿಂದ ಸುಮಾರು 60 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು