ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ: ಮಹಿಳಾ ಮೋರ್ಚಾ ಅಧ್ಯಕ್ಷೆಗೆ ಬಿಜೆಪಿ ಟಿಕೆಟ್‌ ಇಲ್ಲ

Last Updated 23 ಜನವರಿ 2022, 19:32 IST
ಅಕ್ಷರ ಗಾತ್ರ

ಡೆಹ್ರಾಡೂನ್‌:ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೀತು ಖಂಡೂರಿ ಅವರನ್ನು ಉತ್ತರಾಖಂಡ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿಯಿಂದ ಬಿಜೆಪಿ ಕೈಬಿಟ್ಟಿದೆ. ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿದ್ದ, ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾದ ಸರಿತಾ ಆರ್ಯ ಅವರಿಗೆ ಟಿಕೆಟ್‌ ನೀಡಿದೆ.

ಈ ವಾರ ಬಿಡುಗಡೆ ಮಾಡಿದ 59 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಯಮಕೇಶ್ವರ ಕ್ಷೇತ್ರದ ಹಾಲಿ ಶಾಸಕಿಯಾಗಿರುವ ರೀತು ಅವರ ಹೆಸರು ಇರಲಿಲ್ಲ. ರೇಣು ಬಿಷ್ತ್‌ ಅವರನ್ನು ಈ ಕ್ಷೇತ್ರದಿಂದ ಬಿಜೆಪಿ ಕಣಕ್ಕೆ ಇಳಿಸಿದೆ.

ಕೆಲವೇ ದಿನಗಳ ಹಿಂದೆ ಬಿಜೆಪಿ ಸೇರಿದ್ದ ಸರಿತಾ ಆರ್ಯಾ ಅವರಿಗೆ ಅವರು ಬಯಸಿದ್ದ ನೈನಿತಾಲ್‌ ಕ್ಷೇತ್ರದಿಂದಲೇ ಟಿಕೆಟ್‌ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ಭುವನ್‌ ಚಂದ್ರ ಖಂಡೂರಿ ಅವರ ಮಗಳಾಗಿರುವ ರೀತು ಅವರಿಗೆ ಟಿಕೆಟ್‌ ನಿರಾಕರಿಸಿದ್ದು ಪಕ್ಷದಲ್ಲಿ ಹಲವರ ಆಶ್ಚರ್ಯಕ್ಕೆ ಕಾರಣವಾಗಿದೆ. ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅನು ಕಕ್ಕರ್‌ ಅವರ ನೇತೃತ್ವದ ನಿಯೋಗವು ಪಕ್ಷದ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಅಜಯ್‌ ಕುಮಾರ್ ಅವರನ್ನು ಭೇಟಿಯಾಗಿ, ನಿರ್ಧಾರ ಮರುಪರಿಶೀಲನೆಗೆ ಕೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT