ನವದೆಹಲಿ: ನಿರ್ಗತಿಕರು, ಭಿಕ್ಷುಕರು ಹಾಗೂ ಅಲೆಮಾರಿಗಳಿಗೋಸ್ಕರ ವಿಶೇಷ ಲಸಿಕಾ ಅಭಿಯಾನಗಳನ್ನು ನಡೆಸಬೇಕೆಂದು ರಾಜ್ಯ ಸರ್ಕಾರಗಳಿಗೆ ಕೇಂದ್ರವು ಮನವಿ ಮಾಡಿದೆ.

ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಾಧಿಕಾರಿಗಳಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಈ ಕುರಿತು ಪತ್ರ ಬರೆದಿದ್ದಾರೆ.

ಈ ವಿಶೇಷ ಅಭಿಯಾನದಲ್ಲಿ ಎನ್ಜಿಒಗಳು, ಸಮಾಜ ಸೇವಾ ಸಂಸ್ಥೆಗಳು ಹಾಗೂ ಸ್ವಯಂಸೇವಕರ ನೆರವನ್ನು ರಾಜ್ಯ ಸರ್ಕಾರಗಳು ಪಡೆಯಬಹುದೆಂದು ಭೂಷಣ್ ತಿಳಿಸಿದ್ದಾರೆ.

ಲಸಿಕಾ ಅಭಿಯಾನವು ಜನರ ಕೇಂದ್ರಿತವಾಗಿದೆ. ಎಲ್ಲಾ ವರ್ಗದ ಜನರು ಲಸಿಕೆ ಪಡೆದುಕೊಳ್ಳಬೇಕು. ಆ ನಿಟ್ಟಿನಲ್ಲಿ ಸರ್ಕಾರಗಳು ಕಾರ್ಯನಿರ್ವಹಿಸಬೇಕು ಎಂದು ಭೂಷಣ್ ಪತ್ರದಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ ದೈನಂದಿನ ಮತ್ತು ವಾರದ ಪಾಸಿಟಿವಿಟಿ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 2.44ಕ್ಕೆ ಏರಿಕೆಯಾಗಿದ್ದು, ವಾರದ ಪ್ರಮಾಣ ಶೇ 2.43ಕ್ಕೆ ತಲುಪಿದೆ. ಈವರೆಗೆ ಒಟ್ಟು 45,60,33,754 ಡೋಸ್ ಲಸಿಕೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.