ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಕಂಠ ಕ್ಯಾನ್ಸರ್‌ ಲಸಿಕೆ ಅಭಿಯಾನ: ಜೂನ್‌ನಲ್ಲಿ ಚಾಲನೆ

ಮೊದಲ ಹಂತದಲ್ಲಿ ಕರ್ನಾಟಕ ಸೇರಿ ಆರು ರಾಜ್ಯಗಳ ಬಾಲಕಿಯರಿಗೆ ಲಸಿಕೆ
Last Updated 12 ಫೆಬ್ರವರಿ 2023, 15:52 IST
ಅಕ್ಷರ ಗಾತ್ರ

ನವದೆಹಲಿ: ಒಂಭತ್ತರಿಂದ 14 ವರ್ಷ ವಯೋಮಾನದ ಬಾಲಕಿಯರಿಗೆ ಗರ್ಭಕಂಠ ಕ್ಯಾನ್ಸರ್‌ ಲಸಿಕೆ ನೀಡುವ ಅಭಿಯಾನಕ್ಕೆ ಸರ್ಕಾರ ಜೂನ್‌ನಲ್ಲಿ ಚಾಲನೆ ನೀಡುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ಅಭಿಯಾನ ನಡೆಸಲಾಗುವುದು ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ಕರ್ನಾಟಕ, ತಮಿಳುನಾಡು, ಮಿಜೋರಾಂ, ಛತ್ತೀಸಗಢ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ಸುಮಾರು 2.55 ಕೋಟಿ ಬಾಲಕಿಯರಿಗೆ ಹ್ಯೂಮನ್‌ ಪಾಪಿಲ್ಲೊಮವೈರಸ್‌ (ಎಚ್‌ಪಿವಿ) ವಿರೋಧಿ ಲಸಿಕೆಗಳನ್ನು ನೀಡಲಾಗುವುದು ಎನ್ನಲಾಗಿದೆ.

ಸಾರ್ವತ್ರಿಕ ರೋಗನಿರೋಧಕ ಕಾರ್ಯಕ್ರಮದಡಿ ಎಚ್‌ವಿಪಿ ಲಸಿಕೆಗಳನ್ನು ನೀಡಲು ಕೇಂದ್ರ ಆರೋಗ್ಯ ಸಚಿವಾಲಯವು ಮಾರ್ಗನಕ್ಷೆ ರೂಪಿಸಿದೆ. 2026ರ ಒಳಗೆ 16.02 ಡೋಸ್‌ ಲಸಿಕೆಯನ್ನು ಸಂಗ್ರಹಿಸುವ ಸಲುವಾಗಿ ಏಪ್ರಿಲ್‌ನಲ್ಲಿ ಜಾಗತಿಕ ಮಟ್ಟದಲ್ಲಿ ಟೆಂಡರ್‌ ಕರೆಯುವ ನಿರೀಕ್ಷೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ದೇಶೀಯವಾಗಿ ಅಭಿವೃದ್ಧಿಪಡಿಸಿರುವ ‘ಸೆರ್ವಾವ್ಯಾಕ್‌’ ಲಸಿಕೆಯನ್ನು ಸೀರಂ ಇನ್‌ಸ್ಟಿಟ್ಯೂಟ್ ಆಫ್‌ ಇಂಡಿಯಾ ಕಳೆದ ತಿಂಗಳು ಬಿಡುಗಡೆ ಮಾಡಿದೆ. ಖಾಸಗಿ ಮಾರುಕಟ್ಟೆಯಲ್ಲಿ ಈ ಲಸಿಕೆಯು ಒಂದು ಡೋಸ್‌ಗೆ ₹2,000ದಂತೆ ಲಭ್ಯವಿರಲಿದೆ ಎಂದು ಸಂಸ್ಥೆ ಹೇಳಿದೆ.

ಸದ್ಯ, ಅಮೆರಿಕ ಮೂಲದ ‘ಮೆರ್ಕ್ಸ್‌ ಗರ್ಡಸಿಲ್‌’ ಸಂಸ್ಥೆಯ ಎಚ್‌ಪಿವಿ ಲಸಿಕೆ ಮಾತ್ರ ಖಾಸಗಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಒಂದು ಡೋಸ್‌ ಲಸಿಕೆ ಬೆಲೆ ₹10,850 ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT