ಗುರುವಾರ , ಮೇ 13, 2021
40 °C

ನಿರಂಕುಶ ಲಸಿಕೆ ನೀತಿ: ಪ್ರಧಾನಿ ಮಧ್ಯಪ್ರವೇಶಕ್ಕೆ ಸೋನಿಯಾ ಒತ್ತಾಯ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೋವಿಡ್‌ 19 ಲಸಿಕೆ ನೀತಿ ನಿರಂಕುಶವಾಗಿದ್ದು, ತಾರತಮ್ಯದಿಂದ ಕೂಡಿದೆ. ಇದನ್ನು ಸರಿಪಡಿಸಲು ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಈ  ಬಗ್ಗೆ  ಗುರುವಾರ ಪ್ರಧಾನಿಗೆ ಪತ್ರ ಬರೆದಿರುವ ಅವರು, ಹೊಸ ಕೋವಿಡ್‌ ಲಸಿಕೆ ನೀತಿಯು  18 ವರ್ಷದಿಂದ 45 ವರ್ಷದೊಳಗಿರುವ ಎಲ್ಲ ನಾಗರಿಕರಿಗೆ ಉಚಿತವಾಗಿ ಲಸಿಕೆ ನೀಡುವ ಜವಾಬ್ದಾರಿಯಿಂದ ಕೇಂದ್ರ ಹಿಂದೆ ಸರಿದಿರುವುದನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.

ಲಸಿಕೆಗೆ ಏಕರೂಪದ ಬೆಲೆ ನಿಗದಿಯಾಗುವುದರಿಂದ ಎಲ್ಲರಿಗೂ ಅನುಕೂಲವಾಗುತ್ತದೆ. ಈ ಬಗ್ಗೆ ಎಲ್ಲರಿಗೂ ಅರಿವಿದೆ. ಪ್ರಧಾನಿ ಮೋದಿಯವರು ತಕ್ಷಣ ಮಧ್ಯಪ್ರವೇಶಿಸಿ, ಲಸಿಕೆ ನೀತಿಯಲ್ಲಿರುವ ತಾರತಮ್ಯವನ್ನು ಸರಿಪಡಿಸುವಂತೆ ಅವರು ಒತ್ತಾಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು