ಮಂಗಳವಾರ, ಡಿಸೆಂಬರ್ 7, 2021
27 °C

ಉಚಿತ ಯಾತ್ರಾ ಯೋಜನೆಗೆ ವೆಲಂಕಣಿ ಚರ್ಚ್‌ ಸೇರ್ಪಡೆ: ಕೇಜ್ರಿವಾಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಹಿರಿಯ ನಾಗರಿಕರು ಧಾರ್ಮಿಕ ಕ್ಷೇತ್ರಗಳಿಗೆ ಉಚಿತ ಯಾತ್ರೆ ಕೈಗೊಳ್ಳುವ ಸಲುವಾಗಿ ದೆಹಲಿ ಸರ್ಕಾರ ರೂಪಿಸಿರುವ ಯೋಜನೆಗೆ ತಮಿಳುನಾಡಿನ ಪ್ರಸಿದ್ಧ ವೆಲಂಕಣಿ ಚರ್ಚ್‌ ಅನ್ನು ಸೇರ್ಪಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬುಧವಾರ ಹೇಳಿದರು.

‘ಕ್ರೈಸ್ತ ಧರ್ಮದ ಕೆಲವು ಶ್ರದ್ಧಾಕೇಂದ್ರಗಳನ್ನು ಈ ಯೋಜನೆಗೆ ಸೇರ್ಪಡೆ ಮಾಡುವಂತೆ ಕ್ರೈಸ್ತರು ಮಾಡಿದ್ದರು. ಅವರ ಮನವಿ ಮೇರೆಗೆ ವೆಲಂಕಣಿ ಚರ್ಚ್‌ ಅನ್ನು ಯೋಜನೆ ವ್ಯಾಪ್ತಿಗೆ ಸೇರಿಸಲು ತೀರ್ಮಾನಿಸಲಾಗಿದೆ’ ಎಂದು ಅವರು ಆನ್‌ಲೈನ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮುಖ್ಯಮಂತ್ರಿ ತೀರ್ಥ ಯಾತ್ರಾ ಯೋಜನೆ’ಗೆ ಡಿಸೆಂಬರ್ 3ರಂದು ಚಾಲನೆ ನೀಡಲಾಗುವುದು. ಈ ಯೋಜನೆಯಡಿ ಹಿರಿಯ ನಾಗರಿಕ ಯಾತ್ರಾರ್ಥಿಗಳು ಅಯೋಧ್ಯೆಗೆ ಪ್ರಯಾಣ ಬೆಳೆಸುವರು ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು