ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಶ್ಮೀರ: ವೈಷ್ಣೋದೇವಿ ದೇಗುಲದಲ್ಲಿ 700 ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ

Last Updated 27 ಜನವರಿ 2023, 14:21 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಯಾತ್ರಾಸ್ಥಳ ವೈಷ್ಣೋದೇವಿ ದೇವಾಲಯದಲ್ಲಿ 700 ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

2022ರಲ್ಲಿ 91.25 ಲಕ್ಷ ಭಕ್ತರು ಇಲ್ಲಿಗೆ ಬಂದಿದ್ದರು. ಕಳೆದ ಒಂಭತ್ತು ವರ್ಷಗಳಲ್ಲೇ ಇದು ಅತ್ಯಧಿಕ ಭಕ್ತರು ಬಂದ ವರ್ಷವಾಗಿತ್ತು. ಯಾತ್ರಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಯೇ ದೇವಾಲಯ ಮಂಡಳಿಯ ಆದ್ಯತೆಯಾಗಿದೆ ಎಂದು ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿಯ (ಎಸ್‌ಎಂವಿಡಿಎಸ್‌ಬಿ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಶುಲ್‌ ಗಾರ್ಗ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT