ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ತಿಂಗಳಿಂದ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್

Last Updated 14 ಅಕ್ಟೋಬರ್ 2022, 9:51 IST
ಅಕ್ಷರ ಗಾತ್ರ

ನವದೆಹಲಿ: ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲು ದಕ್ಷಿಣ ಭಾರತಕ್ಕೂ ಪ್ರವೇಶಿಸಲಿದ್ದು, ಚೆನ್ನೈ-ಬೆಂಗಳೂರು ಹಾಗೂ ಮೈಸೂರು ನಡುವೆ ಸಂಚರಿಸಲಿದೆ ಎಂದು ವರದಿಯಾಗಿದೆ.

ನವೆಂಬರ್ 10ರಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ದಕ್ಷಿಣ ಭಾರತದಲ್ಲಿ ಪ್ರಯಾಣ ಆರಂಭಿಸಲಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ಚೆನ್ನೈ-ಬೆಂಗಳೂರು-ಮೈಸೂರು ನಡುವಣ ವಂದೇ ಭಾರತ್ ಎಕ್ಸ್‌ಪ್ರೆಸ್ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಲಿದೆ.

ಚುನಾವಣೆ ಸಮೀಪಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗಷ್ಟೇ ವಂದೇ ಭಾರತ್ ಎಕ್ಸ್‌ಪ್ರೆಸ್‌ ಅನ್ನು ಭಾರತೀಯ ರೈಲ್ವೆ ಬಿಡುಗಡೆಗೊಳಿಸಿತ್ತು.

ಕರ್ನಾಟಕದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ವಂದೇ ಭಾರತ್ 2.0 ರೈಲುಗಳು, 'ಕವಚ' ಎಂಬ ರೈಲು ಡಿಕ್ಕಿ ತಪ್ಪಿಸುವ ವ್ಯವಸ್ಥೆ (ಟಿಸಿಎಎಸ್) ಸೇರಿದಂತೆ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ರೈಲು ಕೇವಲ 52 ಸೆಕೆಂಡುಗಳಲ್ಲಿ ಗಂಟೆಗೆ 0ರಿಂದ 100 ಕಿ.ಮೀ. ವೇಗವನ್ನು ಕ್ರಮಿಸುವ ಸಾಮರ್ಥ್ಯ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT