ಭಾನುವಾರ, ಡಿಸೆಂಬರ್ 4, 2022
20 °C

ನಿರುದ್ಯೋಗ, ಭ್ರಷ್ಟಾಚಾರ ಕೊನೆಯಾಗುವವರೆಗೂ ಹೋರಾಟ ಮುಂದುವರಿಯಲಿದೆ: ವರುಣ್‌ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ನಿರುದ್ಯೋಗ, ಭ್ರಷ್ಟಾಚಾರ ಮತ್ತು ಹಣದುಬ್ಬರವು ಅಂತ್ಯವಾಗುವವರೆಗೂ ನನ್ನ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಭಾನುವಾರ ಹೇಳಿದ್ದಾರೆ.

ಮಕ್ಕಳು ಮತ್ತು ಯುವಕರಿಗೆ ಗೌರವ ಸಿಗಬೇಕು. ಅವರು ಸಹಾಯಕ್ಕಾಗಿ ಯಾರ ಮುಂದೆಯೂ ತಲೆಬಾಗಬಾರದು.  ಅಂತಹ ಭಾರತಕ್ಕಾಗಿ ತಾನು ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ಅವರು, ನಿಮ್ಮ ಮಕ್ಕಳಿಗೆ ಕೆಲಸ ಸಿಗುವವರೆಗೂ, ನನ್ನ ‘ಸಂಘರ್ಷ’ ಮುಂದುವರಿಯಲಿದೆ. ಭ್ರಷ್ಟಾಚಾರದ ವಿರುದ್ಧವೂ ನನ್ನ ಹೋರಾಟ ನಿರಂತರವಾಗಿ ಇರಲಿದೆ’ ಎಂದು ಹೇಳಿದ್ದಾರೆ.

‘ನಮ್ಮ ಪೂರ್ವಜರ ತ್ಯಾಗವನ್ನು ವ್ಯರ್ಥವಾಗಲು ನಾವು ಬಿಡುವುದಿಲ್ಲ. ಜನರು ಮೂಲಭೂತ ಸಮಸ್ಯೆಗಳು, ಅನ್ಯಾಯ ಮತ್ತು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಸಮಯ ಬಂದಿದೆ’ ಎಂದು ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು