ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಬೆಂಗಾವಲು ವಾಹನಗಳ ಅಪಘಾತ

ಹಾಪುರ (ಉತ್ತರ ಪ್ರದೇಶ): ಪಶ್ಚಿಮ ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ಬೆಂಗಾವಲು ಪಡೆಯ ನಾಲ್ಕು ವಾಹನಗಳು ಅಪಘಾತಕ್ಕೀಡಾಗಿವೆ.
ನವದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ರೈತರ ಪ್ರತಿಭಟನೆ ವೇಳೆ ಮೃತಪಟ್ಟಿದ್ದ ಯುವಕ ನವ್ರೀತ್ ಸಿಂಗ್ ಅವರ ಕುಟುಂಬದವರನ್ನು ಭೇಟಿಯಾಗಲು ಪ್ರಿಯಾಂಕಾ ಅವರು ಹಾಪುರ ಜಿಲ್ಲೆಯ ರಾಮಪುರಕ್ಕೆ ಹೋಗುತ್ತಿದ್ದರು. ಇವರೊಂದಿಗೆ ಕಾರಿನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯ ಘಟಕದ ಮುಖಂಡ ಅಜಯ್ ಕುಮಾರ್ ಲಲ್ಲು ಇದ್ದರು.
#WATCH Congress' Priyanka Gandhi Vadra cleaned windshield of her vehicle. Her driver had to stop allegedly due to poor visibility through windshield.
Vehicles in her cavalcade collided with each other on Hapur Road earlier today, on her way to Rampur; no injuries reported. pic.twitter.com/bAeUudOFPw
— ANI (@ANI) February 4, 2021
ಹಾಪುರ ಜಿಲ್ಲೆಯ ಗಢ ಮುಕ್ತೇಶ್ವರ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಆದರೆ, ಘಟನೆಯಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ.
ಎಸ್‌ಯುವಿ ಸೇರಿದಂತೆ ನಾಲ್ಕು ವಾಹನಗಳು ಪ್ರಿಯಾಂಕಾ ಅವರನ್ನು ಹಿಂಬಾಲಿಸುತ್ತಿದ್ದವು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವ ವಿಡಿಯೊಗಳಿಂದ ತಿಳಿದುಬಂದಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.