ಜಮ್ಮು– ಶ್ರೀನಗರ ಹೆದ್ದಾರಿಯಲ್ಲಿ ಸಂಚಾರ ಪುನರಾರಂಭ
ಶ್ರೀನಗರ: ಪಂಥಿಯಲ್ ಬಳಿ ಜಮು– ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಮತ್ತು ಬೃಹತ್ ಗಾತ್ರದ ಕಲ್ಲುಗಳು ಉರುಳಿದ್ದ ಪರಿಣಾಮ 24 ಗಂಟೆಗಳಿಗಿಂತ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು. ಗುರುವಾರ ಬೆಳಿಗ್ಗೆ ಹೆದ್ದಾರಿಯನ್ನು ತೆರವುಗೊಳಿಸಲಾಗಿದ್ದು ಸಂಚಾರಕ್ಕೆ ಮುಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
’ಹೆದ್ದಾರಿಯ ಎರಡೂ ಕಡೆ ವಾಹನ ದಟ್ಟಣೆಯನ್ನು ನಿವಾರಿಸಲಾಗಿದೆ’ ಎಂದು ಸಂಚಾರ ನಿಯಂತ್ರಣ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆದ್ದಾರಿಯಲ್ಲಿ ಸಂಚಾರಕ್ಕೆ ನಿರ್ಬಂಧವಿದ್ದ ಕಾರಣ ರಾಮ್‌ಬನ್ ಮತ್ತು ಬನಿಹಾಲ್ ನಡುವಿನ ಭಾರತ್ ಜೋಡೊ ಯಾತ್ರೆಯನ್ನೂ ಸ್ಥಗಿತಗೊಳಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.