ಭಾನುವಾರ, ನವೆಂಬರ್ 27, 2022
27 °C

ಹಿರಿಯ ಕಾಂಗ್ರೆಸ್ ನಾಯಕ ಆರ‍್ಯಾಡನ್‌ ಮುಹಮ್ಮದ್‌ ನಿಧನ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಕೇರಳದ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ‍್ಯಾಡನ್‌ ಮುಹಮ್ಮದ್‌ (87) ಭಾನುವಾರ ನಿಧನರಾದರು.

ಮಲಪ್ಪುರ ಜಿಲ್ಲೆಯ ನಿಲಂಬೂರ್‌ ನಿವಾಸಿಯಾಗಿರುವ ಮುಹಮ್ಮದ್‌ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಇಬ್ಬರು ಪುತ್ರರು ಇದ್ದಾರೆ.

1977 ರಿಂದ 2016ರ ಅವಧಿಯಲ್ಲಿ ನಿಲಂಬೂರು ಕ್ಷೇತ್ರದಿಂದ ಮುಹಮ್ಮದ್‌ ಅವರು ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೂರು ಬಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ನಿಲಂಬೂರ್‌ನಲ್ಲಿರುವ ಮುಹಮ್ಮದ್‌ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು