ಮಂಗಳವಾರ, ಡಿಸೆಂಬರ್ 6, 2022
24 °C

ಆಶಾ ಪಾರೇಖ್‌ಗೆ ಫಾಲ್ಕೆ ಪ್ರಶಸ್ತಿ ಪ್ರದಾನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹಿರಿಯ ನಟಿ ಆಶಾ ಪಾರೇಖ್‌ ಅವರಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಭಾರತೀಯ ಸಿನಿಮಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದೆ.

ಇಲ್ಲಿನ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ 68ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಆಶಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

‘ಭಾರತ ಸರ್ಕಾರ ನನಗೆ ನೀಡಬಹುದಾದ ಬಹು ದೊಡ್ಡ ಗೌರವ ಇದಾಗಿದೆ. ನನ್ನ 80ನೇ ಹುಟ್ಟುಹಬ್ಬಕ್ಕೆ ಒಂದು ದಿನ ಮೊದಲು ಈ ‍ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದೇನೆ. ಇದು ನನಗೆ ಅತೀವ ಸಂತಸ ತಂದಿದೆ. ನನ್ನನ್ನು ಆಯ್ಕೆ ಮಾಡಿದ ಎಲ್ಲಾ ತೀರ್ಪುಗಾರರಿಗೆ ಧನ್ಯವಾದ ತಿಳಿಸುತ್ತೇನೆ’ ಎಂದು ಆಶಾ ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು