ಜಮ್ಶೆಡ್‌ಪುರ: ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡನ ಮೇಲೆ ಜಾರ್ಖಂಡ್‌ನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಬಬ್ಲು ಕುಮಾರ್ ಸಿಂಗ್ ಅವರು ವಿಎಚ್‌ಪಿ ಬಗ್ಬೇರ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸದ್ಯ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಬ್ಲು ಕುಮಾರ್ ಸಿಂಗ್ ಎಂಬುವರ ಮೇಲೆ ಇಬ್ಬರು ದುಷ್ಕರ್ಮಿಗಳು ಐದರಿಂದ ಆರು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ತಮಿಳು ವರ್ಣನ್ ಹೇಳಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಂಕಿತ ಆರೋಪಿಯೊಬ್ಬ ಒಂದು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ಹೇಳಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.