ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಾಂತರಕ್ಕೆ ವಿರೋಧ: 20ರಿಂದ ವಿಎಚ್‌ಪಿಯಿಂದ ರಾಷ್ಟ್ರವ್ಯಾಪಿ ಆಂದೋಲನ

Last Updated 18 ಡಿಸೆಂಬರ್ 2021, 21:12 IST
ಅಕ್ಷರ ಗಾತ್ರ

ನವದೆಹಲಿ: ‘ಕಾನೂನುಬಾಹಿರ ಮತಾಂತರ’ ವಿರುದ್ಧ ಕಠಿಣ ಕಾನೂನು ರೂಪಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ದೇಶದಾದ್ಯಂತ ಸೋಮವಾರದಿಂದ (ಡಿ.20) 11 ದಿನಗಳ ಕಾಲ ಆಂದೋಲನ ಹಮ್ಮಿಕೊಂಡಿದೆ.

ಬುಡಕಟ್ಟು ಜನಾಂಗದವರು ಕ್ರೈಸ್ತ ಹಾಗೂ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರೆ, ಪರಿಶಿಷ್ಟ ಪಂಗಡಗಳಿಗೆ ಸಂವಿಧಾನದಡಿ ನೀಡಲಾಗಿರುವ ಮೀಸಲಾತಿ ಹಾಗೂ ಇತರ ಸೌಲಭ್ಯಗಳನ್ನು ಅವರು ಪಡೆಯುವಂತಿಲ್ಲ ಎಂಬುದನ್ನು ಸಹ ಈ ಕಾನೂನು ಒಳಗೊಳ್ಳಬೇಕು ಎಂಬುದಾಗಿ ಒತ್ತಾಯಿಸಲಾಗುವುದು ಎಂದು ವಿಎಚ್‌ಪಿ ಕಾರ್ಯಾಧ್ಯಕ್ಷ ಅಲೋಕ್‌ ಕುಮಾರ್ ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಘಟನೆ ಹಮ್ಮಿಕೊಂಡಿರುವ ಈ ಆಂದೋಲನಕ್ಕೆ ಬೆಂಬಲ ನೀಡುವಂತೆ ಬಿಜೆಪಿ, ಕಾಂಗ್ರೆಸ್‌, ಜೆಡಿಯು, ಆರ್‌ಜೆಡಿ, ಎಎಪಿ, ಟಿಎಂಸಿ, ಸಿಪಿಎಂ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ 327 ಸಂಸದರನ್ನು ಭೇಟಿ ಮಾಡಿ, ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT