ಭಾನುವಾರ, ಅಕ್ಟೋಬರ್ 25, 2020
27 °C

ಚೀನಾ ಸರಕು ಖರೀದಿಸುವುದು ಶತ್ರುಗಳನ್ನು ಸಬಲೀಕರಣಗೊಳಿಸಿದಂತೆ: ವಿಎಚ್‌ಪಿ ಮುಖಂಡ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್‌: ‘ಚೀನಾದಿಂದ ಸರಕುಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ಜತೆಗೆ ಅಂಥ ಸರಕುಗಳನ್ನು ದೇಶೀಯವಾಗಿಯೇ ಉತ್ಪಾದಿಸಲು ಕೈಗಾರಿಕೋದ್ಯಮಿಗಳು ಮುಂದಾಗಬೇಕು’ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದ್ದಾರೆ. 

ಚೀನಾದ ಸರಕುಗಳನ್ನು ಖರೀದಿಸುವುದರಿಂದ ಶತ್ರುಗಳನ್ನು ಸಬಲೀಕರಣಗೊಳಿಸಿದಂತೆ ಆಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಈ ಕುರಿತು ದೊಡ್ಡ ಉದ್ಯಮಿಗಳು, ತಯಾರಕರ ಸಭೆ ನಡೆಸಿ ಸ್ಥಳೀಯವಾಗಿ ಉತ್ಪಾದಿಸಲು ಆಧ್ಯತೆ ನೀಡುವಂತೆ ಹೇಳುತ್ತಿದ್ದೇವೆ. ಅಲ್ಲದೆ ಚೀನಾದ ಸರಕುಗಳು ಅಗ್ಗವಾಗಿದ್ದರೂ ಅದನ್ನು ಬಹಿಷ್ಕರಿಸುವಂತೆ ಜನರಲ್ಲಿ ಮನವಿ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ. 

ಸಂಘಟನೆಯೂ ಎರಡು ದಿನಗಳ ಕೇಂದ್ರ ಸಮಿತಿ ಸಭೆಯನ್ನು ಇತ್ತೀಚೆಗೆ ನಡೆಸಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಕೃಷಿ ಕ್ಷೇತ್ರವನ್ನು ಬಲಪಡಿಸುವ ಜೊತೆಗೆ ಉದ್ಯೋಗ ಸೃಷ್ಟಿ ಕುರಿತು ಚರ್ಚಿಸಲಾಯಿತು. ಬಡವರು ಮತ್ತು ಮಹಿಳೆಯರ ಆರೋಗ್ಯ ಮತ್ತು ಶಿಕ್ಷಣವನ್ನು ಸುಧಾರಿಸುವ ಕುರಿತು ಚರ್ಚೆ ನಡೆದಿದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು